ಸಂಸ್ಕೃತಿಯನ್ನು ಪೀಳಿಗೆಗೆ ತಲುಪಿಸುವ ಮಾಧ್ಯಮ ಕಲೆ

 ಕಲಾವಿದರ ಅಭಿನಂದನೆ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಮಾತನಾಡಿದರು. ಮೋಹನ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು.
ಕಲಾವಿದರ ಅಭಿನಂದನೆ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಮಾತನಾಡಿದರು. ಮೋಹನ್ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಮೊದಲಾದವರಿದ್ದರು.
Published on
ಬಂಟ್ವಾಳ: ಕಲೆ ಎಂಬುದು ಕೇವಲ ಮನರಂಜನೆಯ ಸಾಧನವಲ್ಲ. ಅದು ಸಮಾಜದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪವಿತ್ರ ಮಾಧ್ಯಮ. ಕಲಾವಿದರ ಸಾಧನೆಯ ಹಿಂದೆ ಅಪಾರ ಪರಿಶ್ರಮ, ತ್ಯಾಗ ಮತ್ತು ನಿರಂತರ ಅಭ್ಯಾಸ ಇರುತ್ತದೆ. ಕಲಾಸಾಧಕರನ್ನು ಸಮಾಜ ಗುರುತಿಸಿ ಗೌರವಿಸಿದಾಗ ಮತ್ತಷ್ಟು ಸಾಧಿಸುವ ಉತ್ಸಾಹ ಹೆಚ್ಚುತ್ತದೆ ಎಂದು ಹಿರಿಯ ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅಭಿಪ್ರಾಯಪಟ್ಟರು.
ಬಂಟ್ವಾಳ ತಾಲೂಕು ಬಂಟರ ಸಂಘದ ವತಿಯಿಂದ ಬಂಟರ ಸಂಘ ಕಾವಳಕಟ್ಟೆ ವಲಯದ ಅಧ್ಯಕ್ಷ ಮೋಹನ್ ಶೆಟ್ಟಿ ನರ್ವಲ್ಡಡ್ಡ ನಿವಾಸದಲ್ಲಿ ತಾಲೂಕುಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದರನ್ನು ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೋಹನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಿಝ್ಲಿಂಗ್ ಡಾನ್ಸ್ ಅಕಾಡೆಮಿಯ ಶುಭಕಿರಣ ಮಣಿ ಹಾಗೂ ತಂಡವನ್ನು ಅಭಿನಂದಿಸಲಾಯಿತು. ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಲೆಕ್ಕಪತ್ರ ಮಂಡಿಸಿದರು.

ಕಾವಳಕಟ್ಟೆ ವಲಯದ ಗೌರವಾಧ್ಯಕ್ಷ ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಗೌರವ ಸಲಹೆಗಾರರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ಉಪಾಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಬಿಯಂತಬೆಟ್ಟು, ಕೋಶಾಧಿಕಾರಿ ಚಂದ್ರಶೇಖರ ಶೆಟ್ಟಿ ಪಣೆಕಲ, ಯುವ ವಿಭಾಗದ ಅಧ್ಯಕ್ಷ ಕಿಶೋರ್ ರೈ ಕಾಡಬೆಟ್ಟು ಉಪಸ್ಥಿತರಿದ್ದರು. ಪುನೀತ್ ಶೆಟ್ಟಿ ಕೈಮಾರು ಸ್ವಾಗತಿಸಿ, ನಿರೂಪಿಸಿದರು. ಉದಯ ಕುಮಾರ್ ಶೆಟ್ಟಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net