ಧ್ಯಾನದಿಂದ ಮಕ್ಕಳಲ್ಲಿ ಜ್ಞಾನ ವೃದ್ಧಿ

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
Published on
ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಮನಸ್ಸು ಶುದ್ಧವಾಗಿದ್ದರೆ ಎಲ್ಲ ವಿದ್ಯೆಗಳು ಬೇಗನೆ ತಿಳಿಯುತ್ತವೆ. ಪಾಲಕರು, ಮಕ್ಕಳು ಒಟ್ಟಿಗೆ ಕುಳಿತು ಊಟ ಮಾಡುವ ಕ್ರಮ ರೂಢಿಸಿಕೊಳ್ಳಬೇಕು. ದಿನದ ಸ್ವಲ್ಪ ಸಮಯವನ್ನಾದರೂ ಮಕ್ಕಳಿಗೆ ಪಾಲಕರು ಮೀಸಲಿಡಬೇಕು ಎಂದು ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದರು.
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವನ್ನು ಗುರುವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮಕ್ಕಳು ಒಳ್ಳೆಯ ಮನಸ್ಸು ಹೊಂದಿರಬೇಕು. ಅದಕ್ಕಾಗಿ ಪ್ರತಿನಿತ್ಯ ಬೆಳಗ್ಗೆ, ಸಂಜೆ ಹತ್ತು ನಿಮಿಷ ತನ್ನ ಇಷ್ಟ ದೇವರ ಧ್ಯಾನ ಮಾಡಬೇಕು. ಇದರಿಂದ ಜ್ಞಾನ ವೃದ್ಧಿಸುತ್ತದೆ ಎಂದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ರ‌್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸ್ವಾಮೀಜಿ ಅಭಿನಂದಿಸಿದರು. ಕ್ರೀಡಾಕೂಟದಲ್ಲಿ ಚಾಂಪಿಯನ್ ಪಡೆದವರಿಗೆ ಸಂಸ್ಥೆಯ ಗೌರವ ಕೋಶಾಧಿಕಾರಿ ಸಿಎ ಗಣೇಶ ಹೆಬ್ಬಾರ್ ಟ್ರೋಫಿ ವಿತರಿಸಿದರು. ಸಂಸ್ಥೆ ಗೌರವ ಕಾರ್ಯದರ್ಶಿ ಶ್ರೀಧರ್ ಕೆ.ರಾವ್ ಶಾಲಾ ಧ್ವಜಾರೋಹಣ ನೆರವೇರಿಸಿದರು.
ಹಳೇ ವಿದ್ಯಾರ್ಥಿ ಸಂಘ ಉಪಾಧ್ಯಕ್ಷ ಕೆ.ಎಲ್.ಕುಂಡಂತಾಯ, ಆಡಳಿತ ಮಂಡಳಿ ಪ್ರತಿನಿಧಿಯಾದ ಪ್ರೊ.ನಿತ್ಯಾನಂದ, ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ, ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಶ್ರೀಕಾಂತ್ ರಾವ್ ಉಪಸ್ಥಿತರಿದ್ದರು.
ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕಿ ಕಾಂತಿ ಭಟ್ ಶೈಕ್ಷಣಿಕ ವರ್ಷದ ವಾರ್ಷಿಕ ವರದಿ ವಾಚಿಸಿದರು. ಹಿರಿಯ ಗಣಿತ ಶಿಕ್ಷಕಿ ಮಾಧವಿ ಪ್ರತಿಭಾ ಪುರಸ್ಕೃತರ ಪಟ್ಟಿ ಓದಿದರು. ಶ್ರುತಿ ಚಾಂಪಿಯನ್ ಪಡೆದವರ ಪಟ್ಟಿ ವಾಚಿಸಿದರು. ಗಗನ್ ಸ್ವಾಗತಿಸಿದರು. ಸಂಧ್ಯಾ ವಂದಿಸಿದರು. ರಕ್ಷಾ ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net