ಸುಳ್ಯದಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಸಭೆ

 ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಯಲಕ್ಷ್ಮೀ ರಾಯಕೊಡ, ತಹಸೀಲ್ದಾರ್ ಮಂಜುಳಾ ಎಂ. ಮೊದಲಾದವರಿದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ಸುಳ್ಯ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಯಲಕ್ಷ್ಮೀ ರಾಯಕೊಡ, ತಹಸೀಲ್ದಾರ್ ಮಂಜುಳಾ ಎಂ. ಮೊದಲಾದವರಿದ್ದರು.
Published on
ಸುಳ್ಯ: ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ರಾಜಕೀಯ ಪಕ್ಷಗಳ ಮುಖಂಡರ ಸಭೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
207 ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮೀ ರಾಯಕೊಡ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಮತದಾರರ ನೋಂದಣಾಧಿಕಾರಿ ತಹಸೀಲ್ದಾರ್ ಮಂಜುಳಾ ಎಂ., ಕಡಬ ತಹಸೀಲ್ದಾರ್ ಜಿ.ಗಣೇಶ್ ಮಾಹಿತಿ ನೀಡಿದರು.
ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ಸುಭೋದ್ ಶೆಟ್ಟಿ ಮೇನಾಲ, ವಿನಯಕುಮಾರ್ ಕಂದಡ್ಕ, ಕಾಂಗ್ರೆಸ್ ಪಕ್ಷದ ಮುಖಂಡರಾದ ಶಶಿಧರ ಎಂ.ಜೆ, ಸತೀಶ್ ನಾಯಕ್ ಮೇಲಿನಮನೆ ಕಡಬ, ಎಎಪಿ ಪಕ್ಷದ ಮುಖಂಡರಾದ ಕಲಂದರ್ ಷಾ, ರಶೀದ್ ಜಟ್ಟಿಪಳ್ಳ ಉಪಸ್ಥಿತರಿದ್ದರು. ಸಭೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಗತಿ ಬಗ್ಗೆ ವಿಮರ್ಶಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಗಣತಿ ನಮೂನೆಗಳ ಡಿಜಿಟಲೈಸೇಶನ್ ಪ್ರಕ್ರಿಯೆಯು ಪ್ರಗತಿಯ ಬಗ್ಗೆ, ಮತದಾರರ ಪಟ್ಟಿಯಲ್ಲಿ 1200ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳ ಪುನರ್ವಿಂಗಡಣೆ ಹಾಗೂ ವಿಭಜನೆ ಕುರಿತು ಚರ್ಚಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net