ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿದರು.
Published on:
Copied
Follow Us
ಉಡುಪಿ: ಜಿಲ್ಲೆಯಲ್ಲಿ ಈ ಹಿಂದೆ ಒಟ್ಟು 1112 ಮತಗಟ್ಟೆಗಳಿದ್ದು, ಹೊಸದಾಗಿ 131 ಮತಗಟ್ಟೆಗಳನ್ನು ಸೃಜನಿಸಲಾಗುತ್ತಿದ್ದು. ಇನ್ನು ಮುಂದೆ ಜಿಲ್ಲೆಯಲ್ಲಿ 1243 ಮತಗಟ್ಟೆಗಳು ಇರಲಿವೆ. 2 ಕಿಲೋ ಮೀಟರ್ ಒಳಗೆ ಮತಗಟ್ಟೆಗಳು ಇರುವ ಹಾಗೆ ಮತದಾರರ ಪಟ್ಟಿಯನ್ನು ಸೃಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎನುಮರೇಶನ್ ನಮೂನೆಗಳನ್ನು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ಆಗಸ್ಟ್ 8 ರ ವರೆಗೆ ನಡೆಯಲಿದ್ದು, ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದ ನಾಗರಿಕರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ ಬಿಎಲ್ಒಗಳಿಗೆ ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ವಿವಿಧ ಪಕ್ಷಗಳ ಮುಖಂಡರಾದ ಹಬೀಬ್ ಅಲಿ, ಜಯರಾಮ್ ಆಚಾರ್ಯ ಹಾಗೂ ಜಗದೀಶ್ ಆಚಾರ್ಯ, ಚಂದ್ರ ಶೇಖರ ಪ್ರಭು ಹಾಗೂ ಶ್ರೀ ಕಾಂತ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.