ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ಸಾವು

 ಚಂದ್ರಶೇಖರ್ ನಾಯ್ಕ
ಚಂದ್ರಶೇಖರ್ ನಾಯ್ಕ
Published on
ಬಂಟ್ವಾಳ: ಶಂಭೂರಿನಲ್ಲಿ ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿ, ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ(55) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕಾನಿಕ್ ಹುದ್ದೆ ನಿರ್ವಹಿಸುತ್ತಿದ್ದರು. ಬುಧವಾರ ಶಂಭೂರು ಸಮೀಪದ ಕುಂದಾಯಗೋಳಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆ ಕಂಬ ಅಳವಡಿಸಿ ವಿದ್ಯುತ್ ತಂತಿ ಎಳೆದು ಸಂಪರ್ಕ ನೀಡಿ ಇಲಾಖೆ ಸಿಬ್ಬಂದಿ ಜತೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಿಂದ ದಿಢೀರ್ ಕೆಳಗೆ ಬಿದ್ದಿದ್ದರು. ಕೂಡಲೇ ಬಿ.ಸಿ.ರೋಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟರುವುದಾಗಿ ತಿಳಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net