ಗಾಂಧೀಜಿಯ ತತ್ವಾದರ್ಶ ಸಾರ್ವಕಾಲಿಕ

ಎಂ.ಜಿ.ಎಂ. ಕಾಲೇಜಿನಲ್ಲಿ ಗಾಂಧಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್​ ಬಹಾದೂರ್​ ಶಾಸ್ತ್ರಿ ಜಯಂತಿ ಆಚರಣೆ
mgm gandhi
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ರೀಡರ್​ ಓ. ಆರ್​. ಪ್ರಕಾಶ್​ ಮಾತನಾಡಿದರು.
Published on: 

ಉಡುಪಿ: ಯುವಕ ಗಾಂಧೀಜಿಯ ಕೆಲಸಗಳು, ನಡೆ, ನುಡಿಗಳು ಇಂದಿನ ಯುವಕರಿಗೆ ಮಾದರಿಯಾಗಿದೆ. ಸತ್ಯಾಗ್ರಹ ಎಂಬ ಹೊಸ ವಿಧಾನವನ್ನು ಹುಟ್ಟುಹಾಕಿದರು. ಗಾಂಧೀಜಿಯ ತತ್ವಾದರ್ಶಗಳು ಸಾರ್ವಕಾಲಿಕ ಎಂದು ಮಂಗಳೂರಿನ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ರೀಡರ್​ ಓ. ಆರ್​. ಪ್ರಕಾಶ್​ ಹೇಳಿದರು.

ಎಂ.ಜಿ.ಎಂ. ಕಾಲೇಜಿನಲ್ಲಿ ಗಾಂಧಿ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್​ ಬಹಾದೂರ್​ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಉಪನ್ಯಾಸ ನೀಡಿದರು.

ಗಾಂಧೀಜಿ 23 ವರ್ಷಕ್ಕೆ ಯುವ ವಕೀಲರಾಗಿ ದಕ್ಷಿಣ ಆಫ್ರಿಕಾಕ್ಕೆ ಹೋಗಿ ಭಾರತೀಯ ಮೂಲದವರ ಧ್ವನಿಯಾಗಿ ಅವರನ್ನು ಸಂಘಟಿಸಿದರು. ಅವರು ಪತ್ರಕರ್ತರಾಗಿ ಇಂಡಿಯನ್​ ಒಪೀನಿಯನ್​ ಪತ್ರಿಕೆಯನ್ನು ನಾಲ್ಕು ಭಾಷೆಗಳಲ್ಲಿ ಪ್ರಕಟಿಸಿದ್ದರು. ಇದು ಸಂಟನೆಗೆ ಉತ್ತಮ ಉದಾಹರಣೆ ಎಂದು ಅವರು ಅಭಿಪ್ರಾಯ ಪಟ್ಟರು.

ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಶ್ವನಾಥ ಪೈ ಎಂ. ಲಾಲ್​ ಬಹಾದೂರ್​ ಶಾಸ್ತ್ರಿಯವರ ಜೀವನ ಹಾಗೂ ಆದರ್ಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ಗಾಯತ್ರಿ ಜಿ. ಪೈ ಅಧ್ಯಕ್ಷತೆಯನ್ನು ವಹಿಸಿದ್ದರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್​ ಎಸ್​. ನಾಯ್ಕ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಮಾತನಾಡಿದರು.

ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನೀತ್​ ರಾವ್​ ಸ್ವಾಗತಿಸಿ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸುಚಿತ್​ ಕೋಟ್ಯಾನ್​ ನಿರೂಪಿಸಿದರು. ಸಂಸತ ವಿಭಾಗ ಮುಖ್ಯಸ್ಥೆ ಡಾ. ವಸುಮತಿ ಭಟ್​ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಗಾಂಧೀಜಿ ಪ್ರಿಯ ಭಜನೆಗಳ ಗಾಯನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net