ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಮಧ್ಯವಯಸ್ಕ ಬಂಧನ

 ಜಯಂತ್
ಜಯಂತ್
Published on

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸರಪಾಡಿ ನಿವಾಸಿ ಜಯಂತ್(47) ಎಂದು ಗುರುತಿಸಲಾಗಿದೆ.

16 ವರ್ಷದ ಬಾಲಕಿಯೊಬ್ಬಳು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಕೆಲ ದಿನಗಳಿಂದ ಅಪರಿಚಿತ ವ್ಯಕ್ತಿ ಬಾಲಕಿಯನ್ನು ಬಸ್ಸಿನಲ್ಲಿ ಬರುವಾಗ ಹಿಂಬಾಲಿಸುತ್ತಿದ್ದ. ಆ.19ರಂದು ಸಂಜೆ ಬಾಲಕಿಯು ಕಲ್ಲಡ್ಕ ಬಸ್ ನಿಲ್ದಾಣಕ್ಕೆ ಬಂದಾಗ ಆತ ಬಾಲಕಿಯನ್ನೇ ನೋಡುತ್ತಿದ್ದು ಇದರಿಂದ ಭಯಗೊಂಡ ಬಾಲಕಿ ತಾಯಿ ಕೆಲಸ ಮಾಡುತ್ತಿದ್ದ ಕಚೇರಿಗೆ ಬಂದು ವಿಷಯ ತಿಳಿಸಿದ್ದಾಳೆ.

ಬಳಿಕ ತಾಯಿ ತನ್ನ ಕಚೇರಿಯ ಮಾಲೀಕರೊಂದಿಗೆ ಬಸ್ ನಿಲ್ದಾಣದ ಬಳಿ ಬಂದು ಅಪರಿಚಿತನನ್ನು ವಿಚಾರಿಸಿದಾಗ ತನ್ನ ಹೆಸರು ಜಯಂತ್ ಎಂದು ತಿಳಿಸಿ ಪರಾರಿಯಾಗಿದ್ದ. ಈ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ಜಯಂತ್‌ನನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net