ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ. ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ, ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ. ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಹೇಳಿದರು.