

ಸ್ಥಳೀಯಾಡಳಿತಗಳಲ್ಲಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳ್ಳದಿರುವುದು ಈ ಸಮಸ್ಯೆಗೆ ಮೂಲ ಕಾರಣ. ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಅವರಿಗೆ ಈ ಬಗ್ಗೆ ಅಗತ್ಯ ಮಾರ್ಗದರ್ಶನ ನೀಡಲು ಸೂಚಿಸಿದ್ದೇನೆ. ಎಲ್ಲಾ ಇಲಾಖೆಗಳು ಒಟ್ಟಾಗಿ ಅಭಿಯಾನ ರೂಪಿಸಬೇಕಿದೆ.
ಮುಖ್ಯಮಂತ್ರಿ ಕಚೇರಿಯ ಸೂಚನೆಯಂತೆ ಅಧಿಕಾರಿಗಳು ‘ಶೂನ್ಯ ಕಸ’ ಮತ್ತು ‘ಸ್ವಚ್ಛಮನೆ’ ಸ್ವಯಂಘೋಷಣಾ ಪತ್ರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಕೇವಲ ಮೂರು ತಿಂಗಳಲ್ಲಿ ಕಸಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸಾಧ್ಯ.