

ಪ್ರತಿಭಟನೆ ಎಚ್ಚರಿಕೆ
ಬಂದರು ನಿರ್ವಹಣೆಯ ಟೆಂಡರ್ ಅವಧಿ ಮುಗಿದಿದ್ದರೂ ಈವರೆಗೆ ಹೊಸ ಟೆಂಡರ್ ಕರೆದಿಲ್ಲ, ಬಂದರಿನ ಸ್ವಚ್ಚತೆ, ಬೀದಿ ದೀಪ ಕೊರತೆ, ಭದ್ರತೆಯ ದೃಷ್ಟಿಯಲ್ಲಿ ಗುಣಮಟ್ಟದ ಸಿಸಿಟಿವಿ ಅಳವಡಿಕೆ ಮಾಡುವಂತೆ ಈ ಹಿಂದೆಯೇ ಸೂಚಿಸಲಾಗಿದ್ದರು ಈವರೆಗೆ ಅಳವಡಿಸಿಲ್ಲ. ಬಂದರು ಇಲಾಖೆಯ ಜಾಗವನ್ನು ಮೀನುಗಾರಿಕಾ ಉದ್ದೇಶಕ್ಕೆ ಮಾತ್ರ ಮಂಜೂರು ಮಾಡಲು ರ್ನಿಣಯಿಸಿದ್ದರೂ, ಇತರ ಉದ್ದೇಶಗಳಿಗೆ ಖಾಸಗಿ ವ್ಯಕ್ತಿಗಳಿಗೆ ನಿಯಮ ಮೀರಿ ಟೆಂಡರ್ ಪ್ರಕ್ರಿಯೆ ನಡೆಸದೆ ನೀಡಲಾಗುತ್ತಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಮೀನುಗಾರರು ಎಚ್ಚರಿಕೆ ನೀಡಿದರು.