ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಂಗಳೂರು ವಿಭಾಗ ನಿಕಟಪೂರ್ವ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ, ಮಾತನಾಡಿದರು. ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉಮೇಶ್ ನಾಯಕ್, ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಉಡುಪಿ ಜಿಲ್ಲಾ ಮರಾಠಿ ನಾಯಕ ಸಮಾಜದ ಅಧ್ಯಕ್ಷ ಕೆ.ಟಿ. ನಾಯಕ್ ಉಪಸ್ಥಿತರಿದ್ದರು. ಖ್ಯಾತ ವಾಗ್ಮಿ ಪ್ರಕಾಶ್ ಮಲ್ಪೆ ದಿಕ್ಸೂಚಿ ಭಾಷಣ ಮಾಡಿದರು. ಬಿಜೆಪಿ ನಗರ ಅಧ್ಯಕ್ಷ ದಿನೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.