ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವ ದೂರಿನ ಹಿನ್ನೆಲೆಯಲ್ಲಿ ನಗರಸಭಾ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಸ್ಥಳ ಪರಿಶೀಲಿಸಿದರು. ಮಹಾಂತೇಶ್ ಹಂಗರಗಿ, ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಗಿರಿಧರ್ ಆಚಾರ್ಯ ಇತರರಿದ್ದರು.
Published on:
Copied
Follow Us
* ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸೂಚನೆ
* ಉಡುಪಿ ಸರ್ವೀಸ್ ಬಸ್ ನಿಲ್ದಾಣ ಪರಿಶೀಲನೆ
ಉಡುಪಿ: ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದ್ದರಿಂದ ಮೇಲ್ಛಾವಣಿಯಿಂದ ಮಳೆ ನೀರು ಸೋರಿಕೆ ಆಗುತ್ತಿದ್ದು, ಪ್ರಯಾಣಿಕರು ಕೊಡೆ ಹಿಡಿದು ನಿಲ್ದಾಣದಲ್ಲಿ ನಿಲ್ಲುವ ಸ್ಥಿತಿ ಉಂಟಾಗಿದೆ. ಮಳೆ, ಗಾಳಿ ಹಾಗೂ ಬಿಸಿಲಿನಿಂದ ಅವರಿಗೆ ಯಾವುದೇ ತೊಂದರೆ ಆಗದಂತೆ ಎರಡು ದಿನದಲ್ಲಿ ತುರ್ತು ಕಾಮಗಾರಿ ನಡೆಸಿ ಎಂದು ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿ ಆಗುತ್ತಿರುವ ಅವ್ಯವಸ್ಥೆಯ ಕುರಿತು ಸಾರ್ವಜನಿಕ ದೂರು ಹಿನ್ನೆಲೆಯಲ್ಲಿ ನಗರಸಭಾ ಅಧಿಕಾರಿಗಳೊಂದಿಗೆ ಸೋಮವಾರ (ಜೂ.8) ಸಂಜೆ ಸ್ಥಳ ಪರಿಶೀಲಿಸಿ ಮಾತನಾಡಿದರು.
ನಿಲ್ದಾಣದಲ್ಲಿ ಕುಡುಕರ ಹಾವಳಿ
ಬಸ್ ನಿಲ್ದಾಣದ ಮೇಲ್ಛಾವಣಿಯ ಶೀಟ್ಗಳು ಶಿಥಿಲಗೊಂಡಿದ್ದರಿಂದ ಮಳೆ ನೀರು ಒಳಗೆ ಬೀಳುತ್ತಿದೆ. ಕೂಡಲೇ ಅವುಗಳನ್ನು ದುರಸ್ತಿ ಮಾಡಿಸಿ ಎಂದು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು. ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿಯ ಬಗ್ಗೆಯೂ ಪ್ರಯಾಣಿಕರಿಂದ ದೂರು ಕೇಳಿ ಬರುತ್ತಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಯಶ್ಪಾಲ್ ಸೂಚಿಸಿದರು.
ಉಡುಪಿ ನಗರಸಭಾ ಪೌರಾಯುಕ್ತ ಮಹಾಂತೇಶ್ ಹಂಗರಗಿ, ನಗರಸಭಾ ಮಾಜಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಗಿರಿಧರ್ ಆಚಾರ್ಯ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ಮಂಜು ಕೊಳ, ಲಕ್ಷ್ಮಣ ಮಲ್ಪೆ ಹಾಗೂ ನಗರಸಭೆಯ ಅಧಿಕಾರಿಗಳು ಇದ್ದರು.
ಅಭಿವೃದ್ಧಿಗೆ ಅನುದಾನದ ಕೊರತೆ
ಬಸ್ ನಿಲ್ದಾಣದ ಅವ್ಯವಸ್ಥೆಯ ಕುರಿತಾಗಿ ಜಿಲ್ಲಾಧಿಕಾರಿಯ ಗಮನಕ್ಕೂ ಈಗಾಗಲೇ ತರಲಾಗಿದ್ದು, ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ನಗರಸಭೆ ಹಾಗೂ ರಾಜ್ಯ ಸರ್ಕಾರದ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಯಶ್ಪಾಲ್ ಭರವಸೆ ನೀಡಿದರು.