ಪಾಂಡೇಶ್ವರ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಜಿ.ರಾಮಚಂದ್ರ ಐತಾಳ್, ನಾಗರತ್ನಾ ಹೇರ್ಳೆ, ಜಯಲಕ್ಷ್ಮೀ ಕೋಟತಟ್ಟು ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಋಷಿರಾಜ್ ಸಾಸ್ತಾನ, ನರೇಂದ್ರ ಕುಮಾರ್ ಕೋಟ, ವಂದನಾ ಮೊದಲಾದವರಿದ್ದರು.
ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ, ಮಾಹಿತಿ ಕೇಂದ್ರ ಆಶ್ರಯ
ಕೋಟ: ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಮನಃಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಪಾಲಕರು ಜಾಗೃತರಾಗುವುದು ಒಳಿತು ಎಂದು ಸಾಮಾಜಿಕ ಚಿಂತಕ ಋಷಿರಾಜ್ ಸಾಸ್ತಾನ ಹೇಳಿದರು.
ಪಾಂಡೇಶ್ವರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಶ್ರಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.
ಸಾಹಿತಿ ನರೇಂದ್ರ ಕುಮಾರ್ ಕೋಟ ಮಾತನಾಡಿದರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗಿಯಾದ ಕಸಾಪ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್, ಶಿಕ್ಷಕಿ ನಾಗರತ್ನಾ ಹೇರ್ಳೆ, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಕೋಟತಟ್ಟು ಅವರನ್ನು ಗೌರವಿಸಲಾಯಿತು. ಸ್ಪರ್ಧೆ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.