ಮೊಬೈಲ್​ ಗೀಳಿನಿಂದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ

ಪಾಂಡೇಶ್ವರ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಸಮಾರಂಭದಲ್ಲಿ ಜಿ.ರಾಮಚಂದ್ರ ಐತಾಳ್​, ನಾಗರತ್ನಾ ಹೇರ್ಳೆ, ಜಯಲಕ್ಷ್ಮೀ ಕೋಟತಟ್ಟು ಅವರನ್ನು ಗೌರವಿಸಲಾಯಿತು. ಪ್ರಮುಖರಾದ ಋಷಿರಾಜ್​ ಸಾಸ್ತಾನ, ನರೇಂದ್ರ ಕುಮಾರ್​ ಕೋಟ, ವಂದನಾ ಮೊದಲಾದವರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸಾಮಾಜಿಕ ಚಿಂತಕ ಋಷಿರಾಜ್​ ಸಾಸ್ತಾನ ಕಳವಳ
  • ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ
ಕೋಟ: ಹೆಚ್ಚು ಮೊಬೈಲ್​ ಬಳಕೆಯಿಂದ ಮಕ್ಕಳ ಮನಃಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಪಾಲಕರು ಜಾಗೃತರಾಗುವುದು ಒಳಿತು ಎಂದು ಸಾಮಾಜಿಕ ಚಿಂತಕ ಋಷಿರಾಜ್​ ಸಾಸ್ತಾನ ಹೇಳಿದರು.
ಪಾಂಡೇಶ್ವರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯಿತಿ, ಅರಿವು ಕೇಂದ್ರ ಡಿಜಿಟಲ್​ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಶ್ರಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.
ಸಾಹಿತಿ ನರೇಂದ್ರ ಕುಮಾರ್​ ಕೋಟ ಮಾತನಾಡಿದರು. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗಿಯಾದ ಕಸಾಪ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್​, ಶಿಕ್ಷಕಿ ನಾಗರತ್ನಾ ಹೇರ್ಳೆ, ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಕೋಟತಟ್ಟು ಅವರನ್ನು ಗೌರವಿಸಲಾಯಿತು.
ಸ್ಪರ್ಧೆ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಪಿಡಿಒ ವಂದನಾ ಅಧ್ಯಕ್ಷತೆ ವಹಿಸಿದ್ದರು. ಉಷಾ ಗಣೇಶ್​ ಪೂಜಾರಿ ಸ್ವಾಗತಿಸಿದರು. ಗ್ರಂಥಪಾಲಕಿ ಜ್ಯೋತಿ ಪೂಜಾರಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net