ಸರ್ಕಾರಿ ಸೇವೆಯತ್ತ ವಿದ್ಯಾರ್ಥಿಗಳಿಗಿರಲಿ ಆಸಕ್ತಿ

ಉಡುಪಿಯಲ್ಲಿ ಆಯೋಜಿಸಿದ್ದ ಪೊಲೀಸ್​ ಕಾನ್​ಸ್ಟೇಬಲ್​ ಹುದ್ದೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ನೇಮಕಾತಿ ಮಾದರಿ ಪರೀಕ್ಷೆ ಹಾಗೂ ಪ್ರೇರಣಾ ಉಚಿತ ಶಿಬಿರ ಉದ್ಘಾಟಿಸಿ ಯಶ್​ಪಾಲ್​ ಸುವರ್ಣ ಮಾತನಾಡಿದರು. ಆಶ್ರಿತಾ ಶೆಟ್ಟಿ, ಜಗದೀಶ್​, ಆದರ್ಶ ಶೆಟ್ಟಿ ಇದ್ದರು.
ಉಡುಪಿಯಲ್ಲಿ ಆಯೋಜಿಸಿದ್ದ ಪೊಲೀಸ್​ ಕಾನ್​ಸ್ಟೇಬಲ್​ ಹುದ್ದೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ನೇಮಕಾತಿ ಮಾದರಿ ಪರೀಕ್ಷೆ ಹಾಗೂ ಪ್ರೇರಣಾ ಉಚಿತ ಶಿಬಿರ ಉದ್ಘಾಟಿಸಿ ಯಶ್​ಪಾಲ್​ ಸುವರ್ಣ ಮಾತನಾಡಿದರು. ಆಶ್ರಿತಾ ಶೆಟ್ಟಿ, ಜಗದೀಶ್​, ಆದರ್ಶ ಶೆಟ್ಟಿ ಇದ್ದರು.
Published on

* ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಆಶಯ

* ಪೊಲೀಸ್​ ನೇಮಕಾತಿ ಮಾದರಿ ಪರೀಕ್ಷಾ ಶಿಬಿರ

ಉಡುಪಿ: ದೇಶದ ಕಾರ್ಯಾಂಗ ವ್ಯವಸ್ಥೆಯಲ್ಲಿ ಐಎಎಸ್​, ಐಪಿಎಸ್​, ಕೆಎಎಸ್​ ನಂತಹ ಸರ್ಕಾರಿ ಸೇವೆಯ ಹುದ್ದೆಗಳು ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶ್ರೇಷ್ಠ ಉದ್ಯೋಗಾವಕಾಶ ಪಡೆಯಲು ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಬೇಕು. ಸರ್ಕಾರಿ ಅಧಿಕಾರಿಗಳಾಗಿ ಜಿಲ್ಲೆಯ ಪ್ರಗತಿಗೆ ಕೊಡುಗೆ ನೀಡುವಂತಾಗಬೇಕು ಎಂದು ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಸಲಹೆ ನೀಡಿದರು.
ಪೊಲೀಸ್​ ಕಾನ್​ಸ್ಟೇಬಲ್​ ಹುದ್ದೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗಾಗಿ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶಾಸಕ ಯಶ್​ಪಾಲ್​ ಸುವರ್ಣ ನೇತೃತ್ವದಲ್ಲಿ ಅಭಿನವ ಭಾರತ ಉಡುಪಿ ಹಾಗೂ ಸ್ಪರ್ಧಾ ಸಾರಥಿ ಕೆಎಎಸ್​ ಅಕಾಡೆಮಿ ಕುಂದಾಪುರ ಇವರ ಸಹಕಾರದಲ್ಲಿ ಭಾನುವಾರ ಆಯೋಜಿಸಿದ್ದ ಮಾದರಿ ಪರೀಕ್ಷೆ ಹಾಗೂ ಪ್ರೇರಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಠಿಣ ಪರಿಶ್ರಮ ಅಗತ್ಯ
ಬ್ರಹ್ಮಾವರ ಪೊಲೀಸ್​ ಠಾಣೆಯ ಪ್ರೊಭೆಷನರಿ ಪೊಲೀಸ್​ ಉಪ ನಿರೀಕ್ಷಕಿ ಆಶ್ರಿತಾ ಶೆಟ್ಟಿ ಮಾತನಾಡಿ, ನಿರಂತರ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು. ಅದಕ್ಕೆ ತಕ್ಕಂತೆ ಪೂರ್ವಸಿದ್ಧತೆ ಮಾಡಿಕೊಂಡಲ್ಲಿ ಸರ್ಕಾರಿ ಹುದ್ದೆಗಳಲ್ಲಿ ಆಯ್ಕೆಯಾಗಲು ವಿಪುಲ ಅವಕಾಶವಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಪೊಲೀಸ್​ ಇಲಾಖೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಸಲ್ಲಿಸುವಂತಾಗಬೇಕು. ಆ ನಿಟ್ಟಿನಲ್ಲಿ ಈ ಶಿಬಿರ ಪೂರಕವಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಜಗದೀಶ್​ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧಾ ಸಾರಥಿ ಸಂಸ್ಥೆಯ ಆಡಳಿತ ನಿರ್ದೇಶಕ ಆದರ್ಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. 
ಮಟ್ಟು ಯತೀಶ್​ ಕೋಟ್ಯಾನ್​ ಕಾರ್ಯಕ್ರಮ ನಿರೂಪಿಸಿದರು. ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
"

ಪ್ರತಿವರ್ಷವೂ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಕರಾವಳಿ ಜಿಲ್ಲೆಯ ವಿದ್ಯಾರ್ಥಿಗಳೇ ಅಗ್ರಸ್ಥಾನ ಪಡೆಯುತ್ತಾರೆ. ಆದರೆ, ಸರ್ಕಾರಿ ಸೇವೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿಲ್ಲ. ಹೀಗಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸಹಕಾರ ನೀಡಲು ಈ ಪ್ರೇರಣಾ ಶಿಬಿರ ಆಯೋಜಿಸಲಾಗಿದೆ.

— ಯಶ್​ಪಾಲ್​ ಸುವರ್ಣ. ಉಡುಪಿ ಶಾಸಕ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net