ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಮಾರ್ಗಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿತ್ತು. ಉಡುಪಿ ನಗರ ಪ್ರವೇಶಿಸುವ ಎಲ್ಲ ಮಾರ್ಗಗಳನ್ನೂ ಬಂದ್ ಮಾಡಲಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಲು ಬಂದಿದ್ದ ಸಾರ್ವಜನಿಕರು ಹಾಗೂ ಲಕ್ಷ ಕಂಠ ಪಾರಾಯಣದಲ್ಲಿ ಪಾಲ್ಗೊಳ್ಳುವ ಎಲ್ಲರನ್ನೂ ಲೋಹ ಪರಿಶೋಧಕ (ಸ್ಕ್ಯಾನಿಂಗ್ ಡಿಟೆಕ್ಟರ್)ದ ಮೂಲಕ ತಪಾಸಣೆ ನಡೆಸಿಯೇ ಒಳಬಿಡಲಾಯಿತು. ಪರ್ಯಾಯ ಮಾರ್ಗಗಳ ಮೂಲಕ ವಾಹನ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮೋದಿ ಆಗಮನದ ಹಿನ್ನೆಲೆಯಲ್ಲಿ ಭದ್ರತೆಗಾಗಿ 9 ಎಸ್ಪಿ, ಒಬ್ಬರು ಹೆಚ್ಚುವರಿ ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್ಪೆಕ್ಟರ್, 127 ಪಿಎಸ್ ಐ, 232 ಎಎಸ್ಐ, 1,917 ಪೊಲೀಸ್ ಸಿಬ್ಬಂದಿ ಹಾಗೂ 100ಕ್ಕೂ ಅಧಿಕ ಹೋಮ್ ಗಾರ್ಡ್ಸ್ಗಳನ್ನೂ ನಿಯೋಜಿಸಲಾಗಿತ್ತು.