ಎಒಎಲ್‌ಇಯ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಗುಡ್ಡಗಾಡು ಓಟಕ್ಕೆ ಚಾಲನೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಸುಳ್ಯ ಎಒಎಲ್‌ಇ ಕಾರ್ಯದರ್ಶಿ ಹೇಮನಾಥ ಕೆ.ವಿ., ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ., ಪ್ರೊ.ದಾಮೋದರ ಗೌಡ ಕೆ.ವಿ., ಚಂದ್ರಶೇಖರ ಪೇರಾಲು, ಕೆ.ಟಿ.ವಿಶ್ವನಾಥ ಮತ್ತಿತರರು ಉಪಸ್ಥಿತರಿದ್ದರು.