ಧರ್ಮಸ್ಥಳ ಯೋಜನೆಯಿಂದ ಸ್ವಾವಲಂಬನೆಗೆ ಪ್ರೇರಣೆ

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ಒಕ್ಕೂಟಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶದಲ್ಲಿ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಮಾಜಿ ಸಚಿವ ರಮಾನಾಥ ರೈ, ಆನಂದ ಸುವರ್ಣ, ಸದಾನಂದ ಗೌಡ ನಾವೂರು ಮತ್ತಿತರರಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಒಕ್ಕೂಟಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶದಲ್ಲಿ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಮಾತನಾಡಿದರು. ಮಾಜಿ ಸಚಿವ ರಮಾನಾಥ ರೈ, ಆನಂದ ಸುವರ್ಣ, ಸದಾನಂದ ಗೌಡ ನಾವೂರು ಮತ್ತಿತರರಿದ್ದರು.
Published on

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರು ಹಾಗೂ ಕುಟುಂಬಗಳನ್ನು ಆರ್ಥಿಕವಾಗಿ ಸಬಲಗೊಳಿಸುವ ಜತೆಗೆ ಸ್ವಾವಲಂಬನೆಯ ಬದುಕಿಗೆ ಪ್ರೇರಣೆ ನೀಡುತ್ತಿದೆ ಎಂದು ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಹೇಳಿದರು.

ಬಂಟ್ವಾಳದಲ್ಲಿ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಬಂಟ್ವಾಳ ಕಸಬಾ ಎ, ಬಂಟ್ವಾಳ ಕಸಬಾ ಸಿ, ಮಣಿಹಳ್ಳ, ಮೂಡನಡಗೋಡು ಎ ಹಾಗೂ ಮೂಡನಡಗೋಡು ಬಿ ಒಕ್ಕೂಟಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕರಾವಳಿ ಪ್ರಾದೇಶಿಕ ವಿಭಾಗದ ಉಡುಪಿ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ದಾಖಲಾತಿ ಹಸ್ತಾಂತರಿಸಿದರು. ಐದು ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು.
ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಹಾಗೂ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್ ಪಂಜಿಕಲ್ಲು ಮುಖ್ಯ ಅತಿಥಿಗಳಾಗಿದ್ದರು.

ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಸದಸ್ಯರಾದ ಸದಾನಂದ ಗೌಡ ನಾವೂರು, ಕೃಷ್ಣಪ್ಪ ಪೂಜಾರಿ ಅಲ್ಲಿಪಾದೆ, ರಮೇಶ್ ಪೂಜಾರಿ, ಮನೋಹರ ಕುಲಾಲ್, ಪದ್ಮನಾಭ ಗೌಡ, ದಿನೇಶ್ ಪೂಜಾರಿ, ಭಾಸ್ಕರ ಕುಲಾಲ್, ಭಾಸ್ಕರ, ರೋಹಿಣಿ, ಉಷಾ, ಚಂಪಾ, ಸುನೀತಾ, ಪ್ರಫುಲ್ಲಾ, ವಸಂತಿ, ನಾಗರಾಜ್ ಉಪಸ್ಥಿತರಿದ್ದರು. ಜಯಾನಂದ ಸ್ವಾಗತಿಸಿದರು. ಪ್ರಫುಲ್ಲಾ ವರದಿ ವಾಚಿಸಿದರು. ಉಮಾಶಂಕರ್ ವಂದಿಸಿದರು.

ಗ್ರಾಮೀಣ ಪ್ರದೇಶದ ಜನರನ್ನು ಸಂಘಟಿಸಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಮುಂದೆ ತರುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ.

— ರಮಾನಾಥ ರೈ, ಮಾಜಿ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net