

ವಾರದೊಳಗೆ ಈ ಎಲ್ಲ ಸಮಸ್ಯೆ ಪರಿಹರಿಸಬೇಕು. ಇನ್ನೆರಡು ದಿನಗಳಲ್ಲಿ ಬ್ಯಾಂಕ್ನ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಶಾಖೆಗೆ ಭೇಟಿ ನೀಡಿ ಇಂದು ಸ್ವೀಕರಿಸಿದ ಎಲ್ಲ ಅಹವಾಲುಗಳನ್ನು ನ್ಯಾಯಯುತವಾಗಿ ಈಡೇರಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳು ಬಡವರ ಕಲ್ಯಾಣ ಕಾರ್ಯಕ್ರಮದ ಅನುಷ್ಠಾನ ಮತ್ತು ಸರ್ಕಾರಿ ಯೋಜನೆ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಸಹಕರಿಸಬೇಕು.