ಮೂಲ್ಕಿ ರೈಲ್ವೆ ನಿಲ್ದಾಣ ಪರಿಸರ ಸ್ವಚ್ಛತೆ

 ಮೂಲ್ಕಿ ರೈಲ್ವೆ ನಿಲ್ದಾಣ ಬಳಿ ತ್ಯಾಜ್ಯ ವಸ್ತು ತೆರವು ಮಾಡಿರುವುದು.
ಮೂಲ್ಕಿ ರೈಲ್ವೆ ನಿಲ್ದಾಣ ಬಳಿ ತ್ಯಾಜ್ಯ ವಸ್ತು ತೆರವು ಮಾಡಿರುವುದು.
Published on

ಮೂಲ್ಕಿ: ಮೂಲ್ಕಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಕಸ-ತ್ಯಾಜ್ಯ ರಾಶಿ ಬಿದ್ದು ದುರ್ನಾತ ಬೀರುತ್ತಿದ್ದ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ.

ರೈಲ್ವೆ ನಿಲ್ದಾಣದ ಸುತ್ತಮುತ್ತ ತ್ಯಾಜ್ಯ ವಿಲೇವಾರಿಯಾಗದೆ ಪ್ರಯಾಣಿಕರು ಹಾಗೂ ಸ್ಥಳೀಯರು ದುರ್ನಾತದಿಂದ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ‘ವಿಜಯವಾಣಿ’ ಆಗಸ್ಟ್ 26ರ ಸಂಚಿಕೆಯಲ್ಲಿ ‘ರೈಲ್ವೆ ನಿಲ್ದಾಣ ಪರಿಸರ ದುರ್ನಾತ’ ಶೀರ್ಷಿಕೆಯಡಿ ಸಚಿತ್ರ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು.
ಸ್ಥಳೀಯ ಪರಿಸರದ ಕೆಲ ನಿವಾಸಿಗಳು ಗೃಹತ್ಯಾಜ್ಯಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ರೈಲ್ವೆ ನಿಲ್ದಾಣದ ಬಳಿ ಎಸೆಯುತ್ತಿರುವುದು ಸಮಸ್ಯೆಗೆ ಪ್ರಮುಖ ಕಾರಣ. ಈ ಪ್ರದೇಶದಲ್ಲಿ ನಿರಂತರ ಕಸ ಎಸೆಯುವುದನ್ನು ತಡೆಯಲು ಮತ್ತು ನಿಯಮಿತ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಪಡುಪಣಂಬೂರು ಗ್ರಾಪಂಗೆ ಈಗಾಗಲೇ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ವತಿಯಿಂದಲೇ ಇಲ್ಲಿನ ಕಸ ಸಂಗ್ರಹ ಮತ್ತು ವಿಲೇವಾರಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net