ಉಡುಪಿಯಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಯಂತಿಯನ್ನು ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಎಂ.ಎ. ಗಫೂರ್, ಪೂರ್ಣಿಮಾ, ದಯಾನಂದ್ ಡಿ. ಕಿದಿಯೂರು, ಇಂದಿರಾ ಬಿ., ಡಾ. ಯಲ್ಲಮ್ಮ, ಹೇಮಾನಂದ ಹಲ್ದಡ್ಕ ಇತರರಿದ್ದರು.
Published on:
Copied
Follow Us
* ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಬಣ್ಣನೆ
* ನಾಡಪ್ರಭುವಿನ ಜಯಂತಿ ಆಚರಣೆ
ಉಡುಪಿ: ನಾಡಪ್ರಭು ಕೆಂಪೇಗೌಡ ನಿರ್ಮಿಸಿರುವ, ಪ್ರಸ್ತುತ ರಾಜ್ಯದ ರಾಜಧಾನಿಯೂ ಆದ ಬೆಂಗಳೂರು ಎಲ್ಲ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದೆ. ನಾಡಿನ ಭವಿಷ್ಯದ ದೂರದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಅಂದು ಅವರು ಜಾರಿಗೆ ತಂದಿರುವ ಹಲವು ಜನಪ್ರಿಯ ಯೋಜನೆಗಳಿಂದ ಬೆಂಗಳೂರು ಇಂದು ವಿಶ್ವದ ಗಮನ ಸೆಳೆದಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಬಣ್ಣಿಸಿದರು.
ಉಡುಪಿ ನಗರದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶನಿವಾರ (ಜೂ.27) ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆದರ್ಶ ಅನುಸರಿಸಿ
ಇಂದಿನ ಪೀಳಿಗೆಗೆ ಕೆಂಪೇಗೌಡರ ಪರಿಶ್ರಮ ಹಾಗೂ ನಾಡು ಕಟ್ಟಿದ ಬಗೆಗೆ ತಿಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಅವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಅವರ ತತ್ವ, ಆದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಬೇಕು ಎಂದು ಸಲಹೆ ನೀಡಿದರು.
ಪೇಟೆಗಳ ನಿರ್ಮಾಣ
ನಿವೃತ್ತ ಉಪನ್ಯಾಸಕ ದಯಾನಂದ್ ಡಿ. ಕಿದಿಯೂರು ಮಾತನಾಡಿ, ಕೆಂಪೇಗೌಡರು ಪ್ರಗತಿಪರ ಚಿಂತನೆ ಹೊಂದಿದ್ದರು. ಪ್ರತಿಯೊಂದು ಜನಾಂಗದ ಕುಲಕಸುಬು ಹಾಗೂ ವೃತ್ತಿ ಆಧಾರಿತವಾಗಿ ಜನರ ಆರ್ಥಿಕ ಅಭಿವೃದ್ಧಿಗೆ ಬೆಂಗಳೂರಿನಲ್ಲಿ ಅನೇಕ ಪೇಟೆಗಳನ್ನು ನಿರ್ಮಿಸಿದ್ದರು. ಅಪಾರವಾಗಿ ಪರಿಸರ ಕಾಳಜಿ ಹೊಂದಿದ್ದ ಅವರು, ಕೃಷಿ ಮತ್ತು ಕುಡಿಯುವ ನೀರಿಗಾಗಿ ಹಲವು ಕೆರೆಗಳನ್ನೂ ನಿರ್ಮಿಸಿದ್ದರು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ, ಉಡುಪಿ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ಉಡುಪಿಯ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ, ಉಡುಪಿ ಜಿಲ್ಲಾ ಒಕ್ಕಲಿಗ ಸೇವಾ ಸಂಘದ ಪದಾಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಇಂದಿರಾ ಬಿ. ವಂದಿಸಿದರು.
"
ಮೂಲ ಸೌಕರ್ಯ ಒದಗಿಸುವುದರೊಂದಿಗೆ ಬೆಂಗಳೂರಿನ ಇಂದಿನ ಅಭಿವೃದ್ಧಿಯಲ್ಲಿ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಸರ್ವಧಮೀರ್ಯರನ್ನೂ ಸಮಾನವಾಗಿ ಕಾಣುತ್ತಿದ್ದ ಅವರ ಆದರ್ಶಗಳು ನಮ್ಮೆಲ್ಲರಿಗೂ, ಮುಂದಿನ ಪೀಳಿಗೆಗೂ ಮಾರ್ಗದರ್ಶನವಾಗಲಿ ಎಂದು ಆಶಿಸುತ್ತೇನೆ.