ಜಿಲ್ಲೆಯಲ್ಲಿ ಸುಮಾರು 2,72,477 ಮಕ್ಕಳಿಗೆ ಅಲ್ಬೆಂಡಾಝೊಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತಿದೆ. 1 ರಿಂದ 5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6 ರಿಂದ 19 ವರ್ಷದೊಳಗಿನವರಿಗೆ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುವುದು. ಈ ದಿನ ಮಾತ್ರೆ ಪಡೆಯದ ಮಕ್ಕಳಿಗೆ ಆ. 17 ರ ಮೋಪ್ ಅಪ್ ದಿನದಂದು ಮಾತ್ರೆಗಳನ್ನು ನೀಡಲಾಗುವುದು ಎಂದರು.