ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು. ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜೋತ್ಸಾ$$್ನ ಬಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಉಪಸ್ಥಿತರಿದ್ದರು. ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಶಶಿಧರ್ ಎಚ್. ನಿರೂಪಿಸಿ, ಡಿಪಿಸಿ ಸುಧೀಂದ್ರ ವಂದಿಸಿದರು.