ಮೂಡುಬಿದಿರೆ ಜನರ ವಿಶ್ವಾಸದಲ್ಲಿ ಹೊಸ ಶಾಖೆ

 ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಶುಭಾರಂಭ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಶಾಸಕ ಉಮಾನಾಥ ಎ.ಕೋಟ್ಯಾನ್, ಕೃಷ್ಣ ಜೆ.ಪಾಲೇಮಾರ್ ಇದ್ದರು.
ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆ ಶುಭಾರಂಭ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಶಾಸಕ ಉಮಾನಾಥ ಎ.ಕೋಟ್ಯಾನ್, ಕೃಷ್ಣ ಜೆ.ಪಾಲೇಮಾರ್ ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ
ಶ್ರೀ ಲಕ್ಷ್ಮಣಾನಂದ ಸ್ವಾಮೀಜಿ ಮೂಲತಃ ವೈದ್ಯರಾಗಿದ್ದು, ಸಮಾಜವನ್ನು ಕಟ್ಟುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ರಾಮಕ್ಷತ್ರೀಯ ಸಮುದಾಯಕ್ಕೆ ಸಹಕಾರ ನೀಡುವ ಉದ್ದೇಶದಿಂದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗಿತ್ತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.
ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ ಮೂಡುಬಿದಿರೆಯಲ್ಲಿ 7ನೇ ಶಾಖೆಯನ್ನು ಆರಂಭಿಸಿದ್ದು, ಭಾನುವಾರ ಮೂಡುಬಿದಿರೆ ಸರ್ಕಾರಿ ಆಸ್ಪತ್ರೆ ಬಳಿಯ ಪ್ರಭು ಕಾಂಪ್ಲೆಕ್ಸ್‌ನ ಒಂದನೇ ಮಹಡಿಯಲ್ಲಿ ನೂತನ ಶಾಖೆಯ ಶುಭಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಸಕ ಉಮಾನಾಥ ಎ.ಕೋಟ್ಯಾನ್ ಮಾತನಾಡಿ, ಮೂಡುಬಿದಿರೆಯ ಜನರ ಮೇಲೆ ವಿಶ್ವಾಸವಿಟ್ಟು ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘವು ಇಲ್ಲಿ ಶಾಖೆ ಆರಂಭಿಸಿರುವುದು ಸಂತಸದ ವಿಚಾರ. ಶಾಖೆಯ ಅಭಿವೃದ್ಧಿಗೆ ಸಾರ್ವಜನಿಕರು ಹಾಗೂ ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಮೂಡುಬಿದಿರೆಯಲ್ಲಿ ಈಗಾಗಲೇ ಹೆಚ್ಚಿನ ಸಂಖ್ಯೆಯ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಗೆ ಕೃಷ್ಣ ಜೆ.ಪಾಲೇಮಾರ್ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ಕಟ್ಟಡದ ಮಾಲೀಕ ಹುಸೇನ್ ಶೇಖ್ ಅವರನ್ನು ಗೌರವಿಸಲಾಯಿತು. ಮೂಡುಬಿದಿರೆ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಪ್ರೇಮಾನಂದ ಕೆ.ಎಸ್., ಉದ್ಯಮಿ ಶ್ರೀಪತಿ ಭಟ್, ಬಿಜೆಪಿ ಮುಖಂಡ ಸುದರ್ಶನ, ವಕೀಲ ಬಾಹುಬಲಿ ಪ್ರಸಾದ್, ಸಂಸ್ಥೆಯ ಸಿಇಒ ಚಂದನ್ ಕೋಟೆಕಾರ್ ಹಾಗೂ ಶಾಖಾ ವ್ಯವಸ್ಥಾಪಕಿ ಚಂದ್ರಿಕಾ ಉಪಸ್ಥಿತರಿದ್ದರು. ರಚಿತ್ ಕಾರ್ಯಕ್ರಮ ನಿರೂಪಿಸಿದರು.

ಮೂಡುಬಿದಿರೆಯಲ್ಲಿ ಸಂಘದ ಶಾಖೆಯನ್ನು ತೆರೆಯಬೇಕು ಎಂಬುದು ಹಲವು ವರ್ಷಗಳ ಕನಸಾಗಿತ್ತು ಕರಾವಳಿಯಾದ್ಯಂತ ಸಂಘದ ಶಾಖೆಗಳನ್ನು ವಿಸ್ತರಿಸುವ ಉದ್ದೇಶವಿದ್ದು, ಎಸ್‌ಎಲ್‌ವಿ ಶಾಖೆಗಳು ಎಲ್ಲೆಡೆ ಇರಬೇಕು. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಸಮಾಜ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net