ಸ್ಥಳಿಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಗಂಡು ಮಗು ಪತ್ತೆಯಾಗಿದ್ದು, ಕೂಡಲೇ ಸ್ಥಳಿಯ ಕ್ಲಿನಿಕ್ಗೆ ಕರೆತಂದಿದ್ದರು. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ಹೆತ್ತವರು ಮಗುವನ್ನು ಎಸೆದು ಹೋಗಿದ್ದ ಕಾರಣದಿಂದ ಮುಖಕ್ಕೆ ತೀವ್ರಗಾಯದಿಂದ ನಿರಂತರ ರಸ್ತಸ್ರಾವ ಉಂಟಾಗಿತ್ತು. ಇದರಿಂದ ಚಿಕಿತ್ಸೆಗೆ ಸ್ಪಂದಿಸಿಲ್ಲ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ರಸ್ತೆ ಬದಿ ಎಸೆದು ಹೋದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.