

ಉಡುಪಿ: ನಿಟ್ಟೆ ವಿಶ್ವವಿದ್ಯಾಲಯ 16ನೇ ವಾರ್ಷಿಕ ಘಟಿಕೋತ್ಸವ ನ. 6 ಮತ್ತು 7 ರಂದು ಮಂಗಳೂರು ಹಾಗೂ ನಿಟ್ಟೆ ಕ್ಯಾಂಪಸ್ಗಳಲ್ಲಿ ಮೂರು ಹಂತಗಳಲ್ಲಿ ಆಯೋಜಿಸಲಿದೆ. ವಿವಿಧ ವಿಭಾಗಗಳ ಒಟ್ಟು 3,325 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆಯನ್ನು ಗುರುತಿಸಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ 57 ಚಿನ್ನದ ಪದಕ ಹಾಗೂ 159 ಪ್ರಶಂಸನಾ ಪತ್ರಗಳನ್ನು ನೀಡಿ ಗೌರವಿಸಲಿದೆ ಎಂದು ಕುಲಪತಿ ಪ್ರೊ. ಡಾ. ಎಂ. ಎಸ್. ಮೂಡಿತ್ತಾಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ. 6ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಕ್ಯಾಂಪಸ್ ದೇರಳಕಟ್ಟೆಯ ವಿಶ್ವವಿದ್ಯಾಲಯದ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಚಂಡೀಗಢದ ಸ್ನಾತಕೋತ್ತರ ವೈದ್ಯಕಿಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಪ್ರೊ. ಡಾ. ವಿವೇಕ್ ಲಾಲ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.
7ರಂದು ಬೆಳಿಗ್ಗೆ 10 ಗಂಟೆಗೆ ನಿಟ್ಟೆ ಆಫ್-ಕ್ಯಾಂಪಸ್ ಸೆಂಟರ್ನಲ್ಲಿ ಎನ್ಎಂಎಎಮ್ ತಾಂತ್ರಿಕ ಸಂಸ್ಥೆಯ ಪದವಿ ವಿದ್ಯಾರ್ಥಿಗಳಿಗಾಗಿ ಪದವಿ ಪ್ರದಾನ ನಡೆಯಲಿದೆ. ಬೆಂಗಳೂರಿನ ಎಸ್-ವ್ಯಾಸ ವಿಶ್ವವಿದ್ಯಾಲಯ ಸಹ-ಕುಲಾಧಿಪತಿ ಹಾಗೂ ಪುಣೆಯ ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಟೆಕ್ನಾಲಜಿಯ ಮಾಜಿ ಕುಲಪತಿ ಡಾ. ಪ್ರಹ್ಲಾದ ರಾಮರಾವ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4 ಗಂಟೆಗೆ ಪಿಎಚ್ಡಿ ಸಂಶೋಧಕರು, ಎನ್ಎಂಎಎಮ್ಐಟಿ ಮತ್ತು ಜೆಕೆಎಸ್ಎಚ್ಐಎಂನ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಡಾ. ಎನ್. ಎಸ್. ಎ. ಎಮ್. ಪ್ರಥಮ ದರ್ಜೆ ಕಾಲೇಜು ಮತ್ತು ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಪ್ರೊೆಶನಲ್ ಎಜುಕೇಶನ್ನ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಧ್ಯಕ್ಷ ಹಾಗೂ ಪ್ರಸಾರ ಭಾರತಿಯ ಮಾಜಿ ಸಿಇಒ ಶಶಿ ಶೇಖರ್ ವೆಂಪತಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಕುಲಾಧಿಪತಿ ವಿಶಾಲ್ ಹೆಗ್ಡೆ ವಹಿಸಲಿದ್ದಾರೆ. ಸಹ-ಕುಲಾಧಿಪತಿ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ ಉಪಸ್ಥಿತರಿರುವರು ಎಂದರು.
ವೈದ್ಯಕಿಯ, ದಂತವೈದ್ಯಕಿಯ, ಫಾರ್ಮಸಿ, ನರ್ಸಿಂಗ್, ಫಿಸಿಯೋಥೆರಪಿ, ಅಲೈಡ್ ಹೆಲ್ತ್ ಸೈನ್ಸಸ್, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಬಯೋಲಾಜಿಕಲ್ ಸೈನ್ಸಸ್, ವಾಸ್ತುಶಿಲ್ಪ, ವಾಕ್ ಮತ್ತು ಶ್ರವಣ, ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ, ಕಂಪ್ಯೂಟರ್ ಅಪ್ಲಿಕೇಶನ್ಸ್, ಬಿಸಿನೆಸ್ ಅಡ್ಮಿನಿಸ್ಟ್ರೆಶನ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 3,325 ವಿದ್ಯಾರ್ಥಿಗಳಲ್ಲಿ 1455 ವಿದ್ಯಾರ್ಥಿಗಳು ಮಂಗಳೂರು ಕ್ಯಾಂಪಸ್ನಲ್ಲಿ ಹಾಗೂ 1870 ವಿದ್ಯಾರ್ಥಿಗಳು ನಿಟ್ಟೆ ಕ್ಯಾಂಪಸ್ನಲ್ಲಿ ಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದರು.
1,148 ಬಿ.ಟೆಕ್, 347 ವೈದ್ಯಕಿಯ, 220 ಫಾರ್ಮಸಿ, 181 ಎಂಸಿಎ, 180 ಎಂಬಿಎ ಮತ್ತು 140 ಬಯೋಲಾಜಿಕಲ್ ಸೈನ್ಸಸ್ ವಿದ್ಯಾರ್ಥಿಗಳು ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ. ವಿಶ್ವವಿದ್ಯಾಲಯ 39 ಚಿನ್ನದ ಪದಕಗಳು ಮತ್ತು 18 ದತ್ತಿ ಚಿನ್ನದ ಪದಕಗಳು ಸೇರಿದಂತೆ ಒಟ್ಟು 57 ಚಿನ್ನದ ಪದಕಗಳನ್ನು ಪ್ರದಾನ ಮಾಡಲಿದೆ. ಉತ್ತಮ ಶೈಕ್ಷಣಿಕ ಸಾಧನೆಗಾಗಿ ವಿದ್ಯಾರ್ಥಿಗಳಿಗೆ 159 ಪ್ರಶಂಸನಾ ಪತ್ರಗಳನ್ನು ನೀಡಲಾಗುವುದು ಎಂದರು.
ಕುಲಸಚಿವ ಡಾ. ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಡಾ. ಪ್ರಸಾದ್ ಶೆಟ್ಟಿ, ಪರೀಕ್ಷಾ ನಿಯಂತ್ರಕ ಡಾ. ಸುಬ್ರಹ್ಮಣ್ಯ ಭಟ್ ಕೆ., ಡೀನ್ಗಳಾದ ಡಾ. ನಿರಂಜನ್ ಎನ್. ಚಿಪ್ಳೂಣಕರ್, ಡಾ. ಸುಧೀರ್ ಎಂ., ಡಾ. ವೀಣಾ ಕುಮಾರಿ ಬಿ. ಕೆ., ಸಾರ್ವಜನಿಕ ಸಂಪರ್ಕಾಧಿಕಾರಿ ಕೃಷ್ಣರಾಜ ಜೋಯಿಸ್ ಎ. ಉಪಸ್ಥಿತರಿದ್ದರು.