

ಏತ ನೀರಾವರಿ ಯೋಜನೆಯ ಸಂಪರ್ಕ ಕಡಿತಗೊಳಿಸಿ ಸರ್ಕಾರ ಮೌನಕ್ಕೆ ಶರಣಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂಧನ ಇಲಾಖೆಯ ನಿರ್ವಹಣೆ ನೆಲಕ್ಕಚ್ಚಿದೆ. ವಿದ್ಯುತ್ ಸಂಪರ್ಕ ಕಡಿತದಿಂದ ರೈತರು ಸಂಕಟ ಅನುಭವಿಸುವಂತಾಗಿದೆ.
ಕಡು ಬೇಸಿಗೆಯ ಸಂದರ್ಭದಲ್ಲಿ ರೈತರ ಕೈ ಹಿಡಿಯಬೇಕಾದ ಸರ್ಕಾರ, ಎಣ್ಣೆಹೊಳೆ ಏತ ನೀರಾವರಿ ಯೋಜನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದು ಅತ್ಯಂತ ಕ್ರೂರ ಮತ್ತು ಅಮಾನವೀಯ ಕ್ರಮವಾಗಿದೆ.
ಅನ್ನದಾತನನ್ನು ಕಣ್ಣೀರು ಹಾಕಿಸುವುದು ಯಾವುದೇ ಸರ್ಕಾರಕ್ಕೆ ಶೋಭೆಯಲ್ಲ. ಬಾಕಿ ಹಣದ ಹೆಸರಿನಲ್ಲಿ ಕೃಷಿಕರನ್ನು ಸಂಕಷ್ಟಕ್ಕೆ ತಳ್ಳುವ ಬದಲು, ಕೂಡಲೇ ವಿದ್ಯುತ್ ಸಂಪರ್ಕವನ್ನು ಪುನಃಸ್ಥಾಪಿಸಿ ರೈತರ ಬೆಳೆಗಳನ್ನು ಉಳಿಸಿಕೊಡಬೇಕು. ಇಲ್ಲವಾದಲ್ಲಿ ಸಂತ್ರಸ್ತ ರೈತರನ್ನು ಸಂಟಿಸಿ ಉಗ್ರ ಹೋರಾಟ ನಡೆಸಲಾಗುವುದು.