ಉಡುಪಿ ನಗರದಲ್ಲಷ್ಟೇ ಅಲ್ಲದೆ ಜಿಲ್ಲೆಯಲ್ಲೂ ಸಹ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ. ಆದರೆ, ಪೆರ್ಡೂರು ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುತ್ತಿದ್ದು, ಟೆಂಡರ್ ಕರೆದು, ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಸಮಸ್ಯೆ ಕಂಡುಬಂದಿದ್ದು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆ ಆದಲ್ಲಿ ಜಿಲ್ಲಾಡಳಿತದ ಸ್ಥಿರ ಸಹಾಯವಾಣಿ ಸಂಖ್ಯೆ 0820-2574802 ಹಾಗೂ ಉಡುಪಿ ನಗರದಲ್ಲಿ ನೀರಿನ ಸಮಸ್ಯೆ ಇದ್ದಲ್ಲಿ ನಗರಸಭೆಯ ಸಹಾಯವಾಣಿ 8749066111 ಕರೆ ಮಾಡಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಿಳಿಸಿದ್ದಾರೆ. ಉಡುಪಿ ತಾಲೂಕಿನಲ್ಲಿ ನೀರಿನ ಸಮಸ್ಯೆಯಾದಲ್ಲಿ ಶಾಸಕರ ಕಚೇರಿ ಸಹಾಯವಾಣಿ 9019566366 ಕರೆ ಮಾಡಬಹುದು ಎಂದು ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.