ಬದುಕುವ ಕಲೆ ಕಲಿಸುವ ಎನ್‌ಎಸ್‌ಎಸ್

 ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಶೈಕ್ಷಣಿಕ ಚಟುವಟಿಕೆಗಳಿಗೆ ಡಾ.ಶೇಷಪ್ಪ ಕೆ. ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ., ಡಾ.ಮಾಲಿನಿ ಅಂಚನ್ ಮೊದಲಾದವರು ಇದ್ದರು.
ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಶೈಕ್ಷಣಿಕ ಚಟುವಟಿಕೆಗಳಿಗೆ ಡಾ.ಶೇಷಪ್ಪ ಕೆ. ಚಾಲನೆ ನೀಡಿದರು. ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ., ಡಾ.ಮಾಲಿನಿ ಅಂಚನ್ ಮೊದಲಾದವರು ಇದ್ದರು.
Published on
ಬೆಳ್ತಂಗಡಿ: ಪಠ್ಯ ತರಗತಿ ನಮಗೆ ಅಕ್ಷರ ಜ್ಞಾನ ಕಲಿಸಿಕೊಟ್ಟರೆ, ರಾಷ್ಟ್ರೀಯ ಸೇವಾ ಯೋಜನೆಯು ಶಿಸ್ತು, ಗೌರವ ಹಾಗೂ ಮೌಲ್ಯಯುತವಾಗಿ ಬದುಕುವ ಕಲೆ ಕಲಿಸಿಕೊಡುತ್ತದೆ. ನಾಯಕತ್ವ ಹಾಗೂ ಸೃಜನಶೀಲ ವ್ಯಕ್ತಿತ್ವ ಮೈಗೂಡಿಸಿಕೊಂಡು ಆತ್ಮವಿಶ್ವಾಸದಿಂದ ಮುಂದೆ ಸಾಗಲು ಪ್ರೋತ್ಸಾಹಿಸುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ.ಶೇಷಪ್ಪ ಕೆ. ಹೇಳಿದರು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೂರು ವರ್ಷಗಳ ಕಾಲ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ.ಮಹೇಶ್ ಶೆಟ್ಟಿ ಅವರನ್ನು ಕಾಲೇಜು ಹಾಗೂ ಸ್ವಯಂ ಸೇವಕರ ವತಿಯಿಂದ ಗೌರವಿಸಲಾಯಿತು. ಯೋಜನಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಉಪನ್ಯಾಸಕ ಡಾ.ಸುಧೀರ್ ಕೆ.ವಿ. ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಪಿ.ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸ್ವಯಂಸೇವಕರಿಗೆ ಬೀಳ್ಕೊಡುಗೆ ನೀಡಲಾಯಿತು. ನೂತನ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಡಾ.ಶೇಷಪ್ಪ ಕೆ. ಪ್ರಮಾಣ ವಚನ ಬೋಧಿಸಿದರು.
ವಿದ್ಯಾರ್ಥಿಗಳು ರಚಿಸಿದ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿನಿ ಮಾನ್ಯಾ ವಾರ್ಷಿಕ ವರದಿ ವಾಚಿಸಿದರು. ಯೋಜನಾಧಿಕಾರಿ ಡಾ.ಮಾಲಿನಿ ಅಂಚನ್, ಹಿರಿಯ ಎನ್‌ಎಸ್‌ಎಸ್ ಯೋಜನಾಧಿಕಾರಿಗಳು, ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಕೆ.ಎನ್.ಧನುಷ್, ಸಾಕ್ಷಿ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಸ್ವಯಂ ಸೇವಕಿ ತೃಥಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net