ಎನ್ಎಸ್ಯುಐ ಅಧ್ಯಕ್ಷ ಸೌರಭ್ ಬಲ್ಲಾಳ, ಉಪಾಧ್ಯಕ್ಷ ಶರತ್ ಕುಂದರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾದಲ್ಲಿ ನಾವು ಸಹಿಸಿಕೊಳ್ಳುವುದಿಲ್ಲ. ನಮ್ಮ ಸಂಘಟನೆ ಅವರಿಗೆ ಬೆನ್ನೆಲುಬಾಗಿ ನಿಲ್ಲುತ್ತದೆ ಎಂದು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ಇಲಾಖೆಯಿಂದ, ಕಾಲೇಜಿನ ಆಡಳಿತ ಮಂಡಳಿ ಅಥವಾ ಬೋಧಕ ವರ್ಗದಿಂದ ತೊಂದರೆಯಾದರೆ ನಿಮ್ಮೊಂದಿಗೆ ನಾವು ಕೈಜೋಡಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.