ಪೌಷ್ಟಿಕಾಹಾರ ಮೇಳದಿಂದ ಆಹಾರ ಪದ್ಧತಿ ಅನಾವರಣ

ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿಕಾಸ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಬಳಕೆಯ ಮಾಹಿತಿ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷೆ ಕುಸುಮಾ ಮನೋಜ್ ಉದ್ಘಾಟಿಸಿದರು. ಪ್ರಮುಖರಾದ ಕೆ.ವಿ.ರಮೇಶ್ ರಾವ್, ರವೀಂದ್ರಕೋಟ, ಇಂದಿರಾ ಇದ್ದರು.
ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿಕಾಸ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಬಳಕೆಯ ಮಾಹಿತಿ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷೆ ಕುಸುಮಾ ಮನೋಜ್ ಉದ್ಘಾಟಿಸಿದರು. ಪ್ರಮುಖರಾದ ಕೆ.ವಿ.ರಮೇಶ್ ರಾವ್, ರವೀಂದ್ರಕೋಟ, ಇಂದಿರಾ ಇದ್ದರು.
Published on

ಕೋಟ: ನಾವು ತಿನ್ನುವ ಆಹಾರದಲ್ಲಿ ಪೌಷ್ಟಿಕ ಆಹಾರ ಇರುವ ಪದಾರ್ಥಗಳಾದ ಸೊಪ್ಪು, ಬೇಳೆ ಕಾಳು, ತರಕಾರಿಗಳನ್ನು ಹೆಚ್ಚು ಹೆಚ್ಚು ಬಳಸಬೇಕು. ಪೌಷ್ಟಿಕಾಹಾರ ಮೇಳಗಳ ಮೂಲಕ ನಮ್ಮ ಹಿಂದಿನ ಆಹಾರ ಪದ್ಧತಿಗಳ ಅನಾವರಣ ಶ್ಲಾಘನೀಯ ಎಂದು ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ಕೆ.ವಿ.ರಮೇಶ್ ರಾವ್ ಹೇಳಿದರು.

ಯಡಬೆಟ್ಟು ವಿದ್ಯೋದಯ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬ್ರಹ್ಮಾವರ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ಭಾನುವಾರ ಪಾಂಡೇಶ್ವರ ವಲಯದ ಸಾಸ್ತಾನ ಕಾರ್ಯಕ್ಷೇತ್ರದ ವಿಕಾಸ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಬಳಕೆ ಮಾಹಿತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷೆ ಕುಸುಮಾ ಮನೋಜ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿ ಮನೋಶಾಸ್ತ್ರಜ್ಞೆ ಜಯಶ್ರೀ ಭಟ್ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು. ಪೌಷ್ಟಿಕ ಆಹಾರ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪತ್ರಕರ್ತ ರವೀಂದ್ರ ಕೋಟ, ಯಡಬೆಟ್ಟು ಶಾಲಾ ಮುಖ್ಯಶಿಕ್ಷಕಿ ಇಂದಿರಾ, ಶೌರ್ಯ ವಿಪತ್ತು ಸದಸ್ಯ ಕಾಳಿಂಗ ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಶೋಭಾ ಸ್ವಾಗತಿಸಿದರು. ಕಲ್ಪನಾ ದಿನಕರ್ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net