ವಾರದ ಸಂತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ

ಬೆದ್ರ ವಾರದ ಸಂತೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆರೋಗ್ಯ ಇಲಾಖೆ, ಪುರಸಭೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸ್ಯಾಂಪಲ್ ಸಂಗ್ರಹಿಸಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಅಧಿಕಾರಿ ಡಾ.ಪ್ರವೀಣ್, ಪುರಸಭೆ ಆರೋಗ್ಯ ನಿರೀಕ್ಷಕಿ ಶಶಿರೇಖಾ ಮೊದಲಾದವರಿದ್ದರು.

Published on

ಮೂಡುಬಿದಿರೆ: ಆಹಾರ ವಸ್ತುಗಳಲ್ಲಿ ಕಲಬೆರಕೆ, ರಾಸಾಯನಿಕ ಬಳಕೆಯ ಆರೋಪಗಳ ಹಿನ್ನೆಲೆಯಲ್ಲಿ ಮೂಡುಬಿದಿರೆ ವಾರದ ಸಂತೆಯಾದ ಶುಕ್ರವಾರ ಆರೋಗ್ಯ ಇಲಾಖೆ, ಪುರಸಭೆ, ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಿವಿಧ ಆಹಾರ ವಸ್ತುಗಳ ಸ್ಯಾಂಪಲ್ ಸಂಗ್ರಹಿಸಿದರು.

ಅಧಿಕಾರಿಗಳು ಸಂತೆ ಪ್ರದೇಶದಲ್ಲಿನ ತರಕಾರಿ, ಹಣ್ಣು ಮಾರಾಟ ಮಳಿಗೆ, ಫಾಸ್ಟ್‌ಫುಡ್ ಕೇಂದ್ರಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಆಹಾರ ವಸ್ತುಗಳ ಸ್ವಚ್ಛತೆ, ಆಹಾರ ಸುರಕ್ಷತೆ ಕುರಿತು ಪರಿಶೀಲನೆ ನಡೆಸಿ ಕೆಲವೆಡೆ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಯಿತು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಡಾ.ಪ್ರವೀಣ್, ಪುರಸಭೆ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಆರೋಗ್ಯ ನಿರೀಕ್ಷಕ ಖಾದರ್ ಸಾಬ್ ನದಾಫ್, ಆಹಾರ ಸುರಕ್ಷತಾ ಅಧಿಕಾರಿ ಗಿರೀಶ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ನಟರಾಜ್, ಪುರಸಭೆ ಕಮ್ಯುನಿಟಿ ಮೊಬಿಲೈಸರ್ ಅಮಿತಾ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net