ಮಂಗಳೂರು: ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜೂ. 26ರಂದು ಹಿರಿಯ ಪತ್ರಕರ್ತ ದಿ.ಗುರುವಪ್ಪ ಎನ್.ಟಿ. ಬಾಳೆಪುಣಿ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ ನಡೆಯಲಿದೆ ಎಂದು ಬುಧವಾರ ಟ್ರಸ್ಟ್ ಅಧ್ಯಕ್ಷ ಮೋಹನ್‌ದಾಸ್ ಮರಕಡ ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ 26ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಒಟ್ಟು 8 ಮಂದಿಗೆ 1.50 ಲಕ್ಷ ರೂ. ಮೊತ್ತದ ದತ್ತಿನಿಧಿ ನೀಡಲಾಗುವುದು. ಆರೋಗ್ಯ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಉದ್ಯಮಿ ರಾಧಾಕೃಷ್ಣ ಉಮಿಯ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಮುಖ್ಯ ಅತಿಥಿಗಳಾಗಿರುವರು. ನರಿಂಗಾನ ಕಂಬಳೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಕಾಜವ ದತ್ತಿನಿಧಿ ಹಸ್ತಾಂತರಿಸಲಿದ್ದಾರೆ.
ಉದ್ಯಮಿ ನಿಶಿತ್ ಪೂಜಾರಿ ಕಾವೂರು, ವಾರ್ತಾಧಿಕಾರಿ ಖಾದರ್ ಶಾ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.