ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಆಯೋಜಿಸಿದ್ದ 'ಅರಿವಿನ ಬೆಳಕು' ಉಪನ್ಯಾಸ ಕಾರ್ಯಕ್ರಮವನ್ನು ಪ್ರೊ.ಸುಬ್ಬಪ್ಪ ಕೈಕಂಬ ಉದ್ಘಾಟಿಸಿದರು. ಡಾ. ವರದರಾಜ್ ಚಂದ್ರಗಿರಿ, ಡಾ.ಗಣನಾಥ್ ಶೆಟ್ಟಿ ಎಕ್ಕಾರು, ಪೂರ್ಣಿಮಾ, ಪುಪ್ಪರಾಜ್ ಇದ್ದರು.
Published on:
Copied
Follow Us
* ಚಿಂತಕ ಡಾ. ವರದರಾಜ್ ಚಂದ್ರಗಿರಿ ಅಭಿಪ್ರಾಯ
* ಪುತ್ತೂರಿನಲ್ಲಿ 'ಅರಿವಿನ ಬೆಳಕು' ಉಪನ್ಯಾಸ ಮಾಲಿಕೆ
ಉಡುಪಿ: ಪ್ರಯೋಗಶೀಲ ಸಾಹಿತ್ಯ ಮತ್ತು ಸಾಮಾಜಿಕ ವಲಯದಲ್ಲಿ ಕಾರ್ಯನಿರ್ವಹಿಸಿದ್ದ ಕೋಟ ಶಿವರಾಮ ಕಾರಂತ ಅವರು ಯಕ್ಷಗಾನಕ್ಕೆ ಜಾಗತಿಕ ಮನ್ನಣೆ ದೊರಕಿಸಿಕೊಟ್ಟವರು. ಪ್ರತಿಯೊಂದು ಕ್ಷೇತ್ರಕ್ಕೂ ಸಹ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ ಅವರು ಜ್ಞಾನದ ದಿಗಂತ ವಿಸ್ತರಿಸಿದವರು ಎಂದು ಚಿಂತಕ ಡಾ. ವರದರಾಜ್ ಚಂದ್ರಗಿರಿ ಅಭಿಪ್ರಾಯಪಟ್ಟರು.
ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನಲ್ಲಿ ಆಯೋಜಿಸಿದ್ದ 'ಅರಿವಿನ ಬೆಳಕು' ಉಪನ್ಯಾಸ ಮಾಲಿಕೆ-15 ಕಾರ್ಯಕ್ರಮದಲ್ಲಿ 'ಕಾರಂತರ ಕಾದಂಬರಿಗಳಲ್ಲಿ ವೈಚಾರಿಕ ಚಿಂತನೆ' ವಿಷಯ ಕುರಿತು ಉಪನ್ಯಾಸ ನೀಡಿದರು.
ವೈಚಾರಿಕ ಚಿಂತನೆ
ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜ್ನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಮಾತನಾಡಿ, ಕಾರಂತರ ಕಾದಂಬರಿ ಮಾತ್ರವಲ್ಲದೆ ಅವರ ಪ್ರತಿಯೊಂದು ಸಾಹಿತ್ಯ ಪ್ರಕಾರವೂ ವೈಚಾರಿಕ ಚಿಂತನೆ ಹೊಂದಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಅವರ ಕೊಡುಗೆ ಅಪಾರವಾಗಿದೆ ಎಂದರು.
ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ್ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಹಾಗೂ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜ್ನ ಐಕ್ಯುಎಸಿ ಸಂಚಾಲಕ ಪುಪ್ಪರಾಜ್ ವಂದಿಸಿದರು.
"
ಜ್ಞಾನವೆಂಬುದು ಬಹುಮುಖಿ. ಎಲ್ಲ ವಿಚಾರಗಳ ಕುರಿತು ಅರಿತಾಗ ಚಿಂತನಾ ಕ್ರಮದಲ್ಲಿ ಬದಲಾವಣೆ ಆಗುತ್ತದೆ. ವಿದ್ಯಾರ್ಥಿಗಳೂ ಸಹ ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿ ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಕಾರಂತರ ಪುಸ್ತಕಗಳನ್ನು ಓದಬೇಕು.
— ಡಾ.ಗಣನಾಥ್ ಶೆಟ್ಟಿ ಎಕ್ಕಾರು. ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ.