ಓದುವ ಹಂಬಲವಿದ್ದರೆ ಮುಕ್ತ ಅವಕಾಶ

ಸೇವಾ ಸಂಕಲ್ಪ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ಎ.ಕಿರಣ್ ಕುಮಾರ್ ಕೊಡ್ಗಿ, ಸಂಪತ್ ಶೆಟ್ಟಿ, ದಿನೇಶ ಹೆಗ್ಡೆ ಮೊಳಹಳ್ಳಿ, ಡಾ.ಕೊತ್ತಾಡಿ ಉಮೇಶ ಶೆಟ್ಟಿ, ವಸಂತ ಗಿಳಿಯಾರ್, ಬಿ.ಉದಯಕುಮಾರ್ ಶೆಟ್ಟಿ, ಬಿ.ವಿನಯ ಕುಮಾರ್ ಶೆಟ್ಟಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ರಾಜೇಶ ಕೆ.ಸಿ., ಸೋನಾಲಿ ಎಸ್.ಶೆಟ್ಟಿ ಉಪಸ್ಥಿತರಿದ್ದರು.
ಸೇವಾ ಸಂಕಲ್ಪ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಪ್ರಮುಖರಾದ ಎ.ಕಿರಣ್ ಕುಮಾರ್ ಕೊಡ್ಗಿ, ಸಂಪತ್ ಶೆಟ್ಟಿ, ದಿನೇಶ ಹೆಗ್ಡೆ ಮೊಳಹಳ್ಳಿ, ಡಾ.ಕೊತ್ತಾಡಿ ಉಮೇಶ ಶೆಟ್ಟಿ, ವಸಂತ ಗಿಳಿಯಾರ್, ಬಿ.ಉದಯಕುಮಾರ್ ಶೆಟ್ಟಿ, ಬಿ.ವಿನಯ ಕುಮಾರ್ ಶೆಟ್ಟಿ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ರಾಜೇಶ ಕೆ.ಸಿ., ಸೋನಾಲಿ ಎಸ್.ಶೆಟ್ಟಿ ಉಪಸ್ಥಿತರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಪ್ರತಿಭೆ, ಶಕ್ತಿ, ಸಾಮರ್ಥ್ಯ ಮತ್ತು ಓದಬೇಕೆಂಬ ಹಂಬಲ ಇದ್ದರೆ ಸಮಾಜದಲ್ಲಿ ಶ್ರೀಮಂತ ಮತ್ತು ಬಡವರೆನ್ನದೆ ಅವಕಾಶಗಳು ಇಂದು ಮುಕ್ತವಾಗಿವೆ. ಸಾರ್ವಜನಿಕ ಜೀವನದಲ್ಲಿ ಒಳ್ಳೆಯ ಕೆಲಸ ಮಾಡಿದವರನ್ನು ಗೌರವಿಸಬೇಕಾದುದು, ಗುರುತಿಸಬೇಕಾದುದು, ಸಮರ್ಥಿಸಬೇಕಾದುದು ಸಮಾಜದ ಕರ್ತವ್ಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬ್ರಹ್ಮಾವರ ವಂಡಾರು ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಮತ್ತು ಶ್ರೀ ಕೃಷ್ಣಪ್ರಸಾದ ಫೌಂಡೇಶನ್ ವತಿಯಿಂದ ಕೋಟೇಶ್ವರದ ಯುವ ಮೆರಿಡಿಯನ್ ಗ್ರಾಮ್ಮಿ ಬಾಲ್‌ರೂಮ್‌ನಲ್ಲಿ ಭಾನುವಾರ ಸೇವಾ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಮಾತನಾಡಿದರು. ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ಚೇರ್ಮನ್ ಸಂಪತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ದಿನೇಶ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ.ಕೊತ್ತಾಡಿ ಉಮೇಶ ಶೆಟ್ಟಿ, ಜನಸೇವಾ ಟ್ರಸ್ಟ್ ಅಧ್ಯಕ್ಷ ವಸಂತ ಗಿಳಿಯಾರ್, ಯುವ ಮೆರಿಡಿಯನ್‌ನ ಆಡಳಿತ ನಿರ್ದೇಶಕರಾದ ಬಿ.ಉದಯಕುಮಾರ್ ಶೆಟ್ಟಿ ಮತ್ತು ಬಿ.ವಿನಯ ಕುಮಾರ್ ಶೆಟ್ಟಿ, ಕುಂದಾಪುರದ ವಕೀಲ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಪತ್ರಕರ್ತ ರಾಜೇಶ ಕೆ.ಸಿ., ಸೋನಾಲಿ ಎಸ್.ಶೆಟ್ಟಿ ಉಪಸ್ಥಿತರಿದ್ದರು. ಎಳ್ಳಂಪಳ್ಳಿ ಸಂತೋಷ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಶ್ರೀನಿವಾಸ ಶೆಟ್ಟಿ ವಂದಿಸಿದರು.

ನೆರವು ಹಸ್ತಾಂತರ

ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರಕ್ಕೆ ನೆರವು, ಕುಂದಾಪುರ ಬಿ.ಬಿ.ಹೆಗ್ಡೆ ಕಾಲೇಜಿಗೆ 50 ಕಂಪ್ಯೂಟರ್ ವಿತರಣೆ, 6 ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ವಿತರಣೆ, ಅದುರೋ ಫೌಂಡೇಶನ್ ಮೂಲಕ ಬಡ ಕುಟುಂಬದ ವಿದ್ಯಾಭ್ಯಾಸ ಮತ್ತು ವೈದ್ಯಕೀಯ ಕ್ಯಾಂಪ್‌ಗೆ ಸಹಾಯಧನ, 2025-26ನೇ ಸಾಲಿಗೆ ಬಡ ಕುಟುಂಬದಿಂದ ಬಂದ 5 ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು 2026-27ನೇ ಸಾಲಿಗೆ 14 ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿವೇತನ ವಿತರಣೆ, ವಂಡಾರು ಮತ್ತು ಸಾಬ್ರಕಟ್ಟೆ ಶಾಲೆಯ ಅತಿಥಿ ಶಿಕ್ಷಕರ ವೇತನ ಪಾವತಿ, ವೈದ್ಯಕೀಯ ಸಹಾಯಧನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ಮತ್ತು ಕೊಡೆ ವಿತರಣೆ ಸೇರಿದಂತೆ 93.64 ಲಕ್ಷ ರೂ. ಮೌಲ್ಯದ ನೆರವು ವಿತರಿಸಲಾಯಿತು.

ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಆದರೆ ಅದು ನಾವೆಲ್ಲ ತಿಳಿದಿರುವ ಮಟ್ಟಿಗೆ ಸಿಗುತ್ತಿಲ್ಲ. ಸಂಪತ್ ಶೆಟ್ಟಿ ಅವರು ದುಡಿಮೆಯ ಒಂದು ಭಾಗವನ್ನು ಶಿಕ್ಷಣಕ್ಕೆ ಮೀಸಲಿಟ್ಟು, ಮಕ್ಕಳನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿವೇತನ ವಿತರಿಸಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಪ್ರಶಂಸನೀಯ.

— ಎ.ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಶಾಸಕ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಕನಸಿಗೆ ಮುನ್ನಡಿ ಬರೆಯಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ದಾನ ನೀಡುವ ಶೇ.80ರಷ್ಟನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ, ಅವರ ಕನಸಿಗೆ ಜೀವ ಕೊಡುವ ಕಾರ್ಯಕ್ರಮಗಳಿಗೆ ವಿನಿಯೋಗ ಮಾಡಲಾಗುತ್ತಿದೆ. ಶೈಕ್ಷಣಿಕ ಪ್ರೋತ್ಸಾಹ ಪಡೆದ ಒಂದಷ್ಟು ಮಕ್ಕಳು ಐಎಎಸ್ ಅಥವಾ ಐಪಿಎಸ್ ಮಾಡಬೇಕು. ಈ ನಿಟ್ಟಿನಲ್ಲಿ ಓದುವವರಿದ್ದರೆ, ಅವರ ಕನಸಿಗೆ ನೆರವಾಗುತ್ತೇನೆ.

— ಸಂಪತ್ ಶೆಟ್ಟಿ ಚೇರ್ಮನ್, ಶ್ರೀ ಕೃಷ್ಣಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net