ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ ಉದ್ಘಾಟಿಸಲಿದ್ದು, ಉದ್ಯಮಿ ಪ್ರಕಾಶ್ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಖಗೋಳದ ವಿಶೇಷತೆ ಹಾಗೂ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಉಚಿತವಾಗಿ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾರ್ವಜನಿಕರು, ವಿಶೇಷವಾಗಿ ವಿದ್ಯಾರ್ಥಿಗಳು ಪ್ರಯೋಜನ ಮಾಡಿಕೊಳ್ಳಬೇಕು ಎಂದು ಕಾರ್ಯಕ್ರಮ ಸಂಘಟಕರಾದ ಗಣೇಶ್ ರಾಜ್ ಸರಳಬೆಟ್ಟು, ಜಯ ಶೆಟ್ಟಿ ಬನ್ನಂಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.