ಮೂಡುಬಿದಿರೆ: ಅಮೃತಜಲ ಯೋಜನೆಯ ಪೈಪ್‌ಲೈನ್ ಅಳವಡಿಕೆಗಾಗಿ ಅಗೆದು, ಬಳಿಕ ನಡೆಸಲಾಗಿರುವ ಕಳಪೆ ತೇಪೆ ಕಾಮಗಾರಿಯ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಾಮಗಾರಿ ನಡೆಸಿದವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಂಡು, ರಸ್ತೆಗಳನ್ನು ಉತ್ತಮ ಗುಣಮಟ್ಟದೊಂದಿಗೆ ಮರುನಿರ್ಮಿಸಬೇಕು ಎಂದು ಆಗ್ರಹಿಸಲಾಗಿದೆ.