ಕ್ರೈಸ್ತರಿಂದ ಶ್ರದ್ಧಾ ಭಕ್ತಿಯ ಪಾಮ್​ ಸಂಡೆ ಆಚರಣೆ

ಡಾ. ಜೆರಾಲ್ಡ್​ ಐಸಾಕ್​ ಲೋಬೊ ಕಲ್ಯಾಣಪುರ ಮಿಲಾಗ್ರಿಸ್​ ಪ್ರಧಾನ ದೇವಾಲಯದಲ್ಲಿ ನಡೆದ ಪಾಮ್​ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು.
ಡಾ. ಜೆರಾಲ್ಡ್​ ಐಸಾಕ್​ ಲೋಬೊ ಕಲ್ಯಾಣಪುರ ಮಿಲಾಗ್ರಿಸ್​ ಪ್ರಧಾನ ದೇವಾಲಯದಲ್ಲಿ ನಡೆದ ಪಾಮ್​ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು.
Published on
ಉಡುಪಿ: ಯೇಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶಿಸಿದ ಸಂಕೇತವಾಗಿ "ಗರಿಗಳ ಭಾನುವಾರ ಹಬ್ಬ' ಎಂದೇ ಪ್ರಸಿದ್ಧಿ ಪಡೆದಿರುವ  ಪಾಮ್​ ಸಂಡೆ ಆಚರಣೆ ಜಿಲ್ಲಾದ್ಯಂತ   ಕ್ರೈಸ್ತರಿಂದ ಶ್ರದ್ಧಾಭಕ್ತಿಯಿಂದ ನಡೆಯಿತು. 

 ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ. ಡಾ. ಜೆರಾಲ್ಡ್​ ಐಸಾಕ್​ ಲೋಬೊ ಕಲ್ಯಾಣಪುರ ಮಿಲಾಗ್ರಿಸ್​ ಪ್ರಧಾನ ದೇವಾಲಯದಲ್ಲಿ ನಡೆದ ಪಾಮ್​ ಸಂಡೆ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಸಂದೇಶ ನೀಡಿದರು. ಚರ್ಚಿನ ಪ್ರಧಾನ ಧರ್ಮಗುರು ವಂ. ಫರ್ಡಿನಾಂಡ್​ ಗೊನ್ಸಾಲ್ವಿಸ್​, ಸಹಾಯಕ ಧರ್ಮಗುರು ವಂ. ಪ್ರದಿಪ್​ ಕಾರ್ಡೊಜಾ ಉಪಸ್ಥಿತರಿದ್ದರು.

ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ
ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ   ಕ್ರೈಸ್ತರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗಿದರು.  ಚರ್ಚುಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪಿಸಿಕೊಂಡು ಬಲಿಪೂಜೆಯನ್ನು ನೆರವೇರಿಸಲಾಯಿತು. ಎಲ್ಲಾ ಚರ್ಚುಗಳಲ್ಲಿ ಪಾಮ್​ ಸಂಡೆಯ ಪ್ರಯುಕ್ತ ವಿಶೇಷ ಪೂಜೆಗಳು ಜರುಗಿದವು. ಉಡುಪಿ ಶೋಕಮಾತಾ ದೇವಾಲಯದಲ್ಲಿ  ಚಾರ್ಲ್ಸ್​ ಮಿನೇಜಸ್​, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ಚರ್ಚಿನ ಪ್ರಧಾನ ಧರ್ಮಗುರು ಹಾಗೂ  ನಿಯೋಜಿತ ಬಿಷಪ್​ ಡಾ. ಲೆಸ್ಲಿ ಸಿ ಡಿಸೋಜಾ,  ತೊಟ್ಟಂ ಸಂತ ಅನ್ನಮ್ಮ ದೇವಾಲಯಲ್ಲಿ ಧರ್ಮಗುರು ಡೆನಿಸ್​ ಡೆಸಾ, ಸಾಸ್ತಾನ ಚರ್ಚಿನಲ್ಲಿ  ಸುನೀಲ್​ ಡಿಸಿಲ್ವಾ, ಉಪಸ್ಥಿತಿಯಲ್ಲಿ ವಿಶೇಷ ಪೂಜೆ ನಡೆಯಿತು. 

ಪವಿತ್ರ ಸಪ್ತಾಹ
ಪಾಮ್​ ಸಂಡೆ ಆಚರಣೆಯೊಂದಿಗೆ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ.  ಗುರುವಾರ ತನ್ನ ಶಿಷ್ಯರೊಂದಿಗೆ ಯೇಸುವಿನ ಕೊನೆಯ ಭೋಜನ ಹಾಗೂ ಶಿಫ್ಯಿರ ಪಾದಗಳನ್ನು ತೊಳೆದ ದಿನವನ್ನು ಸ್ಮರಿಸಲಾಗುತ್ತದೆ. ಶುಕ್ರವಾರ ಯೇಸುಕ್ರಿಸ್ತರ ಮರಣದ ದಿನವಾದ  ಗುಡ್​ ಪೆಡೆ ಆಚರಿಸಲಾಗುತ್ತದೆ. ಶನಿವಾರ ಈಸ್ಟರ್​ ಜಾಗರಣೆ ಮತ್ತು ಭಾನುವಾರ ಯೇಸುಕ್ರಿಸ್ತರ ಪುನರುತ್ಥಾನದ ಪ್ರಯುಕ್ತ  ಈಸ್ಟರ್​ ಹಬ್ಬ ಆಚರಿಸಲಾಗುತ್ತದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net