ಕಾರ್ಕಳ: ಅನೇಕ ವಿವಾದ, ಆರೋಪ ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧಿಸಲಾಗಿರುವ ಮಹಾತ್ವಕಾಂಕ್ಷಿ ಯೋಜನೆಯ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವುದು ತೀವ್ರ ನೋವು ತಂದಿದೆ. ದುಷ್ಕರ್ಮಿಗಳು ಬಾಗಿಲು ಒಡೆದು ಮೇಲ್ಛಾವಣಿ ಸಂಪೂರ್ಣ ಕಿತ್ತು ಹಾಕಿ ತಾಮ್ರದ ಹೊದಿಕೆ ಕಳವು ಮಾಡಿದ್ದು ಕಾರ್ಕಳದ ಇತಿಹಾಸದಲ್ಲಿ ಇದು ದುರ್ದೈವದ ಸಂಗತಿ. ಕಳ್ಳತನವಾಗಲು ಕಾಂಗ್ರೆಸ್ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದೆ. ಥೀಮ್ ಪಾರ್ಕ್ ಪಾಳು ಬಿದ್ದಿರುವುದು ಅಸೂಯೆ ಮತ್ತು ರಾಜಕೀಯ ದ್ವೇಷದ ಫಲ ಎಂದು ಶಾಸಕ, ಮಾಜಿ ಸಚಿವ ಸುನೀಲ್ ಕುಮಾರ್ ಟೀಕಿಸಿದ್ದಾರೆ.