ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ ಮತ್ತು ಅಭಿಮುಖೀಕರಣ ಕಾರ್ಯಕ್ರಮವನ್ನು ವಾಮನ ಎಸ್.ಪೈ ಉದ್ಘಾಟಿಸಿದರು. ಪ್ರಮುಖರಾದ ಕವಿತಾ ಎಂ.ಸಿ., ಡಾ.ಕಾಶೀನಾಥ್ ಪಿ.ಪೈ, ಎನ್.ಸದಾಶಿವ ನಾಯಕ್ ಮೊದಲಾದವರಿದ್ದರು.
Published on:
Copied
Follow Us
ಕುಂದಾಪುರ: ಮಕ್ಕಳ ಸಾಧನೆಯಿಂದ ಪಾಲಕರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಪಾಲಕರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಪರಿಶ್ರಮ ಮತ್ತು ಶ್ರದ್ಧೆಯಿಂದ ಸಾಧನೆ ವಾಡಬೇಕು ಮತ್ತು ಗುರಿ ತಲುಪಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಾಮನ ಎಸ್.ಪೈ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವ ಮತ್ತು ಅಭಿಮುಖೀಕರಣ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷ ಡಾ.ಕಾಶೀನಾಥ್ ಪಿ.ಪೈ, ಕಾರ್ಯದರ್ಶಿ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು.
ಅದಿತಿ ಎಸ್.ಖಾರ್ವಿ ಅವರಿಂದ ಭರತನಾಟ್ಯ ಮತ್ತು ಶ್ಯಾಮ್ ಜಿ.ಎನ್.ಪೂಜಾರಿ ಅವರಿಂದ ಕೊಳಲು ವಾದನ ಹಾಗೂ ರಚಿತ್ ಚಂದ್ರ ಖಾರ್ವಿ ಅವರಿಂದ ತಬಲ ವಾದನ ನಡೆಯಿತು.
ನರೇಂದ್ರ ಎಸ್.ಗಂಗೊಳ್ಳಿ ಸಿಬ್ಬಂದಿಯನ್ನು ಪರಿಚಯಿಸಿದರು. ಎನ್.ಸಿ.ವೆಂಕಟೇಶಮೂರ್ತಿ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮತ್ತು ಪ್ರಮೋದ ಪೈ ಎಂ.ಜಿ. ಕಚೇರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರಾದ ಸುಜಯೀಂದ್ರ ಹಂದೆ ಸ್ವಾಗತಿಸಿದರು. ಉಪನ್ಯಾಸಕಿ ಸುಪ್ರೀತಾ ಆಚಾರ್ಯ ನಿರೂಪಿಸಿದರು. ಉಪನ್ಯಾಸಕ ಥಾಮಸ್ ಪಿ.ಎ. ವಂದಿಸಿದರು.