

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಕಾರ್ಯಕರ್ತರು ಗ್ರಾಮಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಹೇಳಿದರು.
ಮತದಾರರ ಕರಡು ಪಟ್ಟಿ ಪ್ರಕಟವಾದ ಬಳಿಕ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡು ಬಂದರೆ ಸರಿಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದರು.