ರೈಲಿನಿಂದ ಜಿಗಿದು ಪ್ರಯಾಣಿಕ ಮೃತ್ಯು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
indrali death case
ಹೊಸಂಗಡಿ ನಿವಾಸಿ ದಿನೇಶ್​
Published on: 

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್​ ಎಂದು ಗುರುತಿಸಲಾಗಿದೆ.

ದೆಹಲಿ-ಎರ್ನಾಕುಳಂ ನಡುವೆ ಸಂಚರಿಸುವ ನಿಜಾಮುದ್ದೀನ್​ ಎಕ್ಸ್​ಪ್ರೆಸ್​ ರೈಲಿಗೆ ಇಂದ್ರಾಳಿ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ. ಆದರೂ ನಿಲ್ದಾಣದಲ್ಲಿ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಜಿಗಿದು ಸಾವನ್ನಪ್ಪಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್​ಪಿಎಫ್​ ಸಿಬ್ಬಂದಿ ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುದಾಗಿ ದೃಢಪಡಿಸಿದ್ದಾರೆ. ಮಣಿಪಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net