

ಕಾಸರಗೋಡು: ರೈಲಿನಲ್ಲಿ ಪ್ರಯಾಣಿಕರೊಬ್ಬ ಪಾಸ್‌ಪೋರ್ಟ್, ಮೊಬೈಲ್ ಫೋನ್ ಇತ್ಯಾದಿ ಸಾಮಗ್ರಿಗಳನ್ನು ಕಳವುಗೈದ ಆರೋಪಿಯನ್ನು ಘಟನೆ ನಡೆದ 24 ತಾಸಿನೊಳಗೆ ಕಾಸರಗೋಡು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶ ನಿವಾಸಿ ಬರೇಂದ್ರ ರಾವೂತ್ತರ್(37) ಎಂಬಾತನನ್ನು ಕಾಸರಗೋಡು ರೈಲ್ವೆ ಪೊಲೀಸ್ ಠಾಣೆಯ ಎಸ್‌ಐ ಸನಿಲ್ ಕುಮಾರ್ ನೇತೃತ್ವದ ತಂಡ ಬಂಧಿಸಿದೆ.