ಬ್ಯಾರಿಕೇಡ್‌ಗೆ ಬಸ್ ಡಿಕ್ಕಿಯಾಗಿ ಪ್ರಯಾಣಿಕರಿಗೆ ಗಾಯ

 ಸೂರಲ್ಪಾಡಿ ಬಳಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿದೆ.
ಸೂರಲ್ಪಾಡಿ ಬಳಿ ಖಾಸಗಿ ಎಕ್ಸ್‌ಪ್ರೆಸ್ ಬಸ್ ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿದೆ.
Published on
ಗುರುಪುರ: ಮಂಗಳೂರು-ಮೂಡುಬಿದಿರೆ ರಾ.ಹೆ.169ರ ಗಂಜಿಮಠ ಸೂರಲ್ಪಾಡಿಯಲ್ಲಿ ನಿರ್ಮಿಸಲಾಗುತ್ತಿರುವ ನೂತನ ಟೋಲ್‌ಗೇಟ್ ಪ್ರದೇಶದಲ್ಲಿ ಭಾನುವಾರ ಅಪರಾಹ್ನ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ ಬಸ್ ಚಾಲಕನ ಸಹಿತ ಒಂದಿಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸೂರಲ್ಪಾಡಿಯಲ್ಲಿ ಟಿಪ್ಪರ್ ಲಾರಿಯೊಂದು ಏಕಾಏಕಿ ಎಡಕ್ಕೆ ತಿರುಗಿಸಿದಾಗ ಹಿಂದಿನಿಂದ ಕಾರ್ಕಳದಿಂದ ಮಂಗಳೂರಿನತ್ತ ಸಾಗುತ್ತಿದ್ದ ಎಕ್ಸ್‌ಪ್ರೆಸ್ ಬಸ್, ಅಪಘಾತ ತಪ್ಪಿಸಲು ಬಲಕ್ಕೆ ತಿರುಗಿಸಿದ ಪರಿಣಾಮ ಸಿಮೆಂಟ್ ಬ್ಯಾರಿಕೇಡ್‌ಗಳಿಗೆ ಡಿಕ್ಕಿಯಾಗಿದೆ.
ಬಸ್‌ನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಾಳುಗಳ ಚಿಕಿತ್ಸೆಗೆ ಸ್ಥಳೀಯರು ನೆರವಾಗಿದ್ದು, ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಬಜ್ಪೆ ಪೊಲೀಸರು ತನಿಖೆ ನಡೆಸಿದ್ದಾರೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ 35 ಪ್ರಯಾಣಿಕರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net