ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಚಿವ ಯು.ಟಿ.ಖಾದರ್ ಶುಕ್ರವಾರ ಸಂಜೆ ಭೇಟಿ ನೀಡಿ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು. ಡಾ.ದಿನೇಶ್ ಕಾಮತ್, ಚಂದ್ರಹಾಸ್ ಆರ್.ಕರ್ಕೇರ, ಬೇಬಿ ಕುಂದರ್ ಇತರರಿದ್ದರು.
ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಸಚಿವ ಖಾದರ್, ಯಾವುದೇ ಕಾರಣಕ್ಕೂ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗದೆ ಸಮಸ್ಯೆ ಆಗಬಾರದು. ಈ ಕುರಿತು ಅಧಿಕಾರಿಗಳು ಆಗಾಗ ಪರಿಶೀಲಿಸುತ್ತಿರಬೇಕು ಎಂದರು.
ರೋಗಿಗಳ ಜತೆಗೆ ಮಾತುಕತೆ ನಡೆಸಿದ ಬಳಿಕ ಸಚಿವರು ಆಸ್ಪತ್ರೆಯ ಆರೋಗ್ಯಾಧಿಕಾರಿಯಿಂದ ವರದಿ ಪಡೆದುಕೊಂಡರು. ಈ ವೇಳೆ ಔಷಧಗಳ ಸಂಗ್ರಹ, ವೈದ್ಯರ ಹಾಜರಾತಿ ಪುಸ್ತಕ ಪರಿಶೀಲಿಸಿದರು. ಬಳಿಕ ಅಧಿಕಾರಿಗಳ ಜತೆಗೆ ತಾಲೂಕು ಆಸ್ಪತ್ರೆಯ ಅಭಿವೃದ್ಧಿ ಕುರಿತು ಸಭೆ ನಡೆಸಿದರು.
ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ದಿನೇಶ್ ಕಾಮತ್, ಚಂದ್ರಹಾಸ್ ಆರ್.ಕರ್ಕೇರ, ಬೇಬಿ ಕುಂದರ್, ಅಬ್ದುಲ್ ರರಝಾಕ್ ಕುಕ್ಕಾಜೆ, ರಶೀದ್ ವಿಟ್ಲ, ರಿಯಾಜ್ ನರಿಕೊಂಬು, ಸುರೇಶ್ ನಾವೂರು, ಫಯಾಜ್ ಮುಡಿಪು, ಯು.ಟಿ.ಫರೀದ್, ವೈದ್ಯರು, ಸಿಬ್ಬಂದಿ, ಇದ್ದರು.
"
ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ತಂಡವಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದ್ದು, ಆಸ್ಪತ್ರೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಕುರಿತು ಚರ್ಚಿಸಲಾಗಿದೆ. ಇಲ್ಲಿ 12 ವೈದ್ಯರು, 25 ಡಿ ಗ್ರೂಪ್ ನೌಕರರು, 27 ನರ್ಸ್‌ಗಳಿದ್ದಾರೆ. ಡಯಾಲಿಸಿಸ್ ಕೇಂದ್ರ ಪೂರ್ಣ ಪ್ರವಾಣದಲ್ಲಿ ಕಾರ್ಯ ನಿರ್ವಹಿಸುತ್ತಿದೆ.