ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ACCIDENT
ACCIDENT
Published on
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಕೋತಲಕಟ್ಟೆ ರಿಕ್ಷಾ ನಿಲ್ದಾಣದ ಸಮೀಪ ರಸ್ತೆ ದಾಟಲು ತೆರಳುತ್ತಿದ್ದ ಉಳಿಯಾರಗೋಳಿ ಕೈಪುಂಜಾಲು ನಿವಾಸಿ ಹರಿನಾರಾಯಣ ರಾವ್(80) ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ
ಪಾಕತಜ್ಞರ ಸಹಾಯಕರಾಗಿದ್ದ ಅವರು ಮನೆಯಿಂದ ಕೋತಲಕಟ್ಟೆಗೆ ಬಂದು ಅಲ್ಲಿಂದ ಕಾಪುವಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿಯ ಬಳಿ ರಸ್ತೆ ದಾಟಲು ನಡೆದುಕೊಂಡು ಹೋಗುತ್ತಿದ್ದ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅವರು ಕಾಪುವಿನ ಪಾಕತಜ್ಞ ಗುರುರಾಜ ಭಟ್ ಅವರೊಂದಿಗೆ ಹಲವು ವರ್ಷಗಳಿಂದ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net