ಉಳ್ಳಾಲ:ತೊಕ್ಕೊಟ್ಟು ರಿಕ್ಷಾ ಪಾರ್ಕ್ ಬಳಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಮಂಗಳವಾರ ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಾದಚಾರಿ ಕಾಪಿಕಾಡು ನಿವಾಸಿ, ಕ್ಯಾಟರಿಂಗ್ ಮಾಲೀಕ ಚಂದ್ರಶೇಖರ್(62) ಗಂಭೀರ ಗಾಯಗೊಂಡಿದ್ದಾರೆ.
ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಕ್ಷಾ ಚಾಲಕ ಪ್ರಶಾಂತ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.