

ಕಾರ್ಕಳ: ಕಾರ್ಕಳ ನಗರದ ಬಸ್ ನಿಲ್ದಾಣದ ಆಟೋ ಸ್ಟ್ಯಾಂಡ್ ಬಳಿ ಶುಕ್ರವಾರ ಅತಿ ವೇಗ ಹಾಗೂ ನಿರ್ಲಕ್ಷೃತನದಿಂದ ಬಸ್ ಚಲಾಯಿಸಿದ ಪರಿಣಾಮ ರಸ್ತೆ ಬದಿ ನಿಂತಿದ್ದ ಪ್ರಾಣೇಶ್ ಎಂಬುವರಿಗೆ ಡಿಕ್ಕಿಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿಕೊಂಡು ಬಂದು ಪ್ರಾಣೇಶ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಅವರ ಬಲಕಾಲಿಗೆ ತೀವ್ರ ಗಾಯವಾಗಿದ್ದು, ತಕ್ಷಣ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.