ಬಾಂಗ್ಲಾದಲ್ಲಿ ಹಿಂದುಗಳ ರಕ್ಷಣೆಗೆ ಧಾವಿಸುವಂತೆ ಪೇಜಾವರ ಶ್ರೀ ಒತ್ತಾಯ

 ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು
ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು
Published on

ಉಡುಪಿ: ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾಕ ಹಿಂದುಗಳ ಮೇಲೆ ನಡೆಯುತ್ತಿರುವ ಭೀಕರ ಕ್ರೌರ್ಯದ ಸರಣಿ ಕಂಡು ತೀವ್ರ ಆಘಾತವಾಗುತ್ತಿದೆ. ಈ ಭೀಭಿತ್ಸ ಕೃತ್ಯಗಳನ್ನು ತಡೆಯಲು ಕೇಂದ್ರ ಸರ್ಕಾರ ತಕ್ಷಣ ಕ್ರಮವಹಿಸಬೇಕು ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಜಗತ್ತಿನ ಸಮಸ್ತರ ಒಳಿತಿಗಾಗಿ ಹಿಂದು ಸಮಾಜ ನಿರಂತರ ಸ್ಪಂದಿಸಿದೆ. ಶಾಂತಿ ಸಹಬಾಳ್ವೆಯ ತತ್ವಗಳನ್ನು ನಮ್ಮ ಎಲ್ಲೆ ಮೀರಿ ಅನುಷ್ಠಾನಿಸಿದ್ದೇವೆ. ಆದರೆ ನಮ್ಮದೇ ನೆರೆಯ ದೇಶವೊಂದರಲ್ಲಿ
ಹಿಂದುಗಳ ಮೇಲೆ ನಡೆಯುತ್ತಿರುವ ಪೈಶಾಚಿಕ ಹಾಗೂ ಅಮಾನವೀಯ ದಾಳಿಗಳು ಹಿಂಸೆ, ಕೊಲೆ ಅತ್ಯಾಚಾರಗಳನ್ನು ಕಂಡು ಭಾರತದ ಹಿಂದುಗಳು ತೀವ್ರ ದು@ಖಿತರಾಗಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣ ಸಾಧ್ಯವಿರುವ ಎಲ್ಲ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡು ಬಾಂಗ್ಲಾದಲ್ಲಿ ಹಿಂದುಗಳ ರಕ್ಷಣೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಶ್ರೀಗಳು ಒತ್ತಾಯಿಸಿದ್ದಾರೆ.

ಜ.10ಕ್ಕೆ ದೀಪಬೆಳಗಿಸಿ ಪ್ರಾರ್ಥಿಸಿ
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ಮಾರಣಾಂತಿಕ ದೌರ್ಜನ್ಯಗಳ ಅಂತ್ಯಕಾಣಬೇಕು ಹಾಗೂ ಮೃತರಾದವರಿಗೆ ಸದ್ಗತಿ ಪ್ರಾರ್ಥಿಸಿ ಜ. 10ರಂದು ದೇಶಾದ್ಯಂತ ಪ್ರತಿ ಹಿಂದುಗಳು ಮನೆ, ಮಠ, ಮಂದಿರಗಳಲ್ಲಿ ದೇವರಿಗೆ ದೀಪ ಬೆಳಗಿ ಪ್ರಾರ್ಥಿಸುವಂತೆ ಶ್ರೀಗಳು ಕರೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net