ನಿಯಮ ಉಲ್ಲಂಘಿಸಿದವರಿಗೆ ದಂಡ

 ಸಂಚಾರಿ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಕುಂದಾಪುರ ಸಂಚಾರ ಠಾಣಾ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಯಿತು.
ಸಂಚಾರಿ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಉಡುಪಿಯ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಕುಂದಾಪುರ ಸಂಚಾರ ಠಾಣಾ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಯಿತು.
Published on
ವಿಜಯವಾಣಿ ಸುದ್ದಿಜಾಲ ಕುಂದಾಪುರ
ಬಸ್‌ಗಳಲ್ಲಿ ಬಾಗಿಲು ಅಳವಡಿಕೆ ಹಾಗೂ ಇರುವ ಬಾಗಿಲುಗಳ ಸರಿಪಡಿಸುವಿಕೆ, ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸುತ್ತಿರುವುದು ಸಹಿತ ಸಂಚಾರಿ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ಸೋಮವಾರ ಸಂಜೆ ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಕುಂದಾಪುರ ಸಂಚಾರ ಠಾಣಾ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಯಿತು.
ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರಾದ ಮಾರುತಿ ನಾಯ್ಕ, ಆಶಾ, ಕುಂದಾಪುರ ಸಂಚಾರ ಠಾಣಾ ಪಿಎಸ್‌ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದರು.
ಪ್ರಯಾಣಿಕರು ಬಸ್ ಹತ್ತುವ(ಫುಟ್ ಬೋರ್ಡ್) ಸ್ಥಳದಲ್ಲಿ ನಿಲ್ಲುವ ಬಗ್ಗೆ, ಬಾಗಿಲು ಹಾಕದೆ ಬಸ್ ಚಾಲನೆ ಮಾಡುತ್ತಿರುವ ಕುರಿತಂತೆ ದೂರುಗಳು ಬಂದ ಹಿನ್ನೆಲೆ ಕುಂದಾಪುರ ಸಂಚಾರ ಠಾಣಾ ಪೊಲೀಸರು ಬಸ್‌ಗಳನ್ನು ಪತ್ತೆ ಮಾಡಿ ದಂಡ ವಿಧಿಸಿದ್ದಾರೆ. ಗಂಭೀರ ಪ್ರಕರಣಗಳೆರಡರಲ್ಲಿ ಆರ್.ಟಿ.ಒ. ಅಧಿಕಾರಿಗಳು ಸಂಬಂಧಪಟ್ಟ ವಾಹನಗಳಿಗೆ ತನಿಖಾ ವರದಿಯ ನೋಟಿಸ್ ನೀಡಿದ್ದಾರೆ. ಕೆಲವೊಂದು ಅಗತ್ಯ ನಿಯಮಗಳನ್ನು ಪಾಲಿಸುವಂತೆ ಚಾಲಕರಿಗೆ, ನಿರ್ವಾಹಕರಿಗೆ ಸೂಚನೆಗಳನ್ನು ನೀಡಿದ್ದಾರೆ.

ಪ್ರಯಾಣಿಕರ ಸುರಕ್ಷತೆ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ವಿಶೇಷ ಅಭಿಯಾನ ನಿರಂತರವಾಗಿ ನಡೆಯುತ್ತಿದೆ. ಬಸ್‌ಗಳು, ಶಾಲಾ ವಾಹನಗಳನ್ನು ತಪಾಸಣೆ ನಡೆಸುವ ಸಂದರ್ಭ ಕಾನೂನು ಉಲ್ಲಂಘಿಸಿದ್ದು ಕಂಡುಬಂದಿದ್ದು ಅವರಿಗೆ ನೋಟಿಸ್ ನೀಡಲಾಗಿದೆ. ಕೆಲವೊಂದು ವಾಹನಗಳಿಗೆ ಸಂಚಾರ ಪೊಲೀಸರು ದಂಡವನ್ನೂ ವಿಧಿಸಿದ್ದಾರೆ. ಜಿಲ್ಲಾದ್ಯಂತ ಈ ಅಭಿಯಾನ ಮುಂದವರಿಯಲಿದೆ.

— ಮಾರುತಿ ನಾಯ್ಕ ಮೋಟಾರು ವಾಹನ ನಿರೀಕ್ಷಕರು, ಉಡುಪಿ ಪ್ರಾದೇಶಿಕ ಸಾರಿಗೆ ಇಲಾಖೆ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net